Astrology (ಸಾಂದರ್ಭಿಕ ಚಿತ್ರ) 
ಜ್ಯೋತಿಷ್ಯ

ಉದ್ಯೋಗದಲ್ಲಿ ಬಡ್ತಿ, ವ್ಯವಹಾರದಲ್ಲಿ ಲಾಭ: ಮಂಗಳ ಸಂಚಾರದಿಂದ ಈ ರಾಶಿಯವರ ಹಣೆಬರಹವೇ ಬದಲಾಗಲಿದೆ! Astrology

Astrology: ಧೈರ್ಯ, ಶಕ್ತಿ ಮತ್ತು ಶಕ್ತಿಯ ಗ್ರಹವಾದ ಮಂಗಳವು ಏಪ್ರಿಲ್ 24 ರಂದು ರೇವತಿ ನಕ್ಷತ್ರವನ್ನು ಪ್ರವೇಶಿಸುತ್ತದೆ. ಜ್ಯೋತಿಷ್ಯದ ಪ್ರಕಾರ ಮಂಗಳನು ಮೇ 11 ರವರೆಗೆ ರೇವತಿ ನಕ್ಷತ್ರದಲ್ಲಿ ಇರುತ್ತಾನೆ. ಇದನ್ನು ಗ್ರಹಗಳ ರಾಜ ಬುಧನು ಆಳುತ್ತಾನೆ. ಈ ರಾಶಿಗೆ ಮಂಗಳ ಆಗಮಿಸುವುದರಿಂದ ಕೆಲವೊಂದು ರಾಶಿಯವರಿಗೆ ಶುಭವೆಂದು ಹೇಳಲಾಗುತ್ತದೆ. ಹಾಗಿದ್ದರೆ ಯಾವ ರಾಶಿಯವರಿಗೆ ಉತ್ತಮ ಎಂದು ನೋಡೋಣ ಬನ್ನಿ...

ಮೇಷ ರಾಶಿ

ಮಂಗಳ ಗ್ರಹವು ರೇವತಿ ನಕ್ಷತ್ರಕ್ಕೆ ಪ್ರವೇಶಿಸಿದ ನಂತರ, ನಿಮ್ಮ ಆರ್ಥಿಕ ಸಮಸ್ಯೆಯು ಕೊನೆಗೊಳ್ಳಲಿದೆ. ಉದ್ಯೋಗದಲ್ಲಿರುವವರಿಗೆ ಸಂಬಳ, ಬಡ್ತಿ ಹೆಚ್ಚಾಗಲಿದೆ. ಹಳೆಯ ಹೂಡಿಕೆಗಳು ಲಾಭವನ್ನು ನೀಡಬಲ್ಲವು. ಹೊಸ ವ್ಯವಹಾರದೊಂದಿಗೆ ಒಪ್ಪಂದಗಳು ಗಮನಾರ್ಹ ಪ್ರಯೋಜನಗಳನ್ನು ತರಲಿವೆ. ಕುಟುಂಬದಲ್ಲಿ ಸಂತೋಷದ ವಾತಾವರಣವಿರಲಿದೆ.

ಮಿಥುನ ರಾಶಿ

ಮಿಥುನ ರಾಶಿಯವರಿಗೆ ಇದು ಒಳ್ಳೆಯ ಸಮಯವಾಗಿರುತ್ತದೆ. ಕಚೇರಿಯಲ್ಲಿ ಉದ್ಯೋಗಿಗಳು ಮೇಲಾಧಿಕಾರಿಯಿಂದ ಪ್ರಶಂಸೆ ಪಡೆಯಲಿದ್ದೀರಿ. ನಿಮ್ಮ ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಮಾರ್ಕೆಟಿಂಗ್​, ಮಾಧ್ಯಮ, ಜಾಹೀರಾತು ಸಂವಹನ ವೃತ್ತಿಪರ ಕ್ಷೇತ್ರದಲ್ಲಿ ಕೆಲಸ ಮಾಡುವವರು ಪ್ರಯೋಜನಗಳನ್ನು ಪಡೆಯಲಿದ್ದೀರಿ. ಕುಟುಂಬದಲ್ಲಿ ನೆಮ್ಮದಿ ಇರಲಿದ್ದು, ಸಂಗಾತಿಯೊಂದಿಗೆ ದೂರ ಪ್ರಯಾಣ ಮಾಡಲಿದ್ದೀರಿ.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಈ ಮಂಗಳ ಗ್ರಹದ ಸಂಚಾರವು ತುಂಬಾ ಪ್ರಯೋಜನಕಾರಿಯಾಗಲಿದೆ. ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗಲಿದ್ದು, ಸರ್ಕಾರಿ ವಲಯದಲ್ಲಿ ಕೆಲಸ ಮಾಡುವರು ಶುಭ ಸುದ್ದಿಯನ್ನು ಕೇಳಬಹುದು. ದೂರದ ಪ್ರಯಾಣ ಮಾಡುವವರಿಗೆ ಈ ಸಮಯವು ಉತ್ತಮವಾಗಲಿದೆ. ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಈ ಸಮಯ ಸೂಕ್ತವಾಗಿದೆ (ಏಜೆನ್ಸೀಸ್​).
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು/ ಪಂಚಾಂಗಗಳು/ ನಂಬಿಕೆಗಳು/ ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್​ಸೈಟ್​ ಜವಾಬ್ದಾರರಾಗಿರುವುದಿಲ್ಲ.