Astrology (ಸಾಂದರ್ಭಿಕ ಚಿತ್ರ) 
ಜ್ಯೋತಿಷ್ಯ

ಶನಿ ಸಂಚಾರ 2026: ಈ ರಾಶಿಯವರಿಗೆ ಆರಂಭವಾಗಲಿದೆ 'ಗೋಲ್ಡನ್ ಟೈಮ್'! ನಿಮ್ದೂ ಇದೇ ರಾಶಿನಾ? Astrology

Astrology: ಜ್ಯೋತಿಷ್ಯದಲ್ಲಿ ಶನಿಯು ಅತ್ಯಂತ ಪ್ರಭಾವಶಾಲಿ ಗ್ರಹಗಳಲ್ಲಿ ಒಂದು ಎನ್ನಲಾಗುತ್ತದೆ. ಏಕೆಂದರೆ, ಶನಿಯು ವ್ಯಕ್ತಿಗಳಿಗೆ ಅವರ ಕ್ರಿಯೆಗಳಿಗೆ ಅನುಗುಣವಾಗಿ ಫಲಿತಾಂಶಗಳನ್ನು ನೀಡುತ್ತಾನೆ. ಅದಕ್ಕಾಗಿಯೇ ಇದನ್ನು ನ್ಯಾಯದ ಸಂಕೇತವೆಂದು ಪರಿಗಣಿಸಲಾಗುತ್ತದೆ.
2026ರಲ್ಲಿ ಶನಿಯ ಸ್ಥಾನದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ಮಾರ್ಚ್​ 13 ರಿಂದಲೇ ಕೆಲವೊಂದು ರಾಶಿಯವರಲ್ಲಿ ಶನಿಯು ನೆಲೆಸಿದ್ದು, ಅದರ ಪ್ರಭಾವವು ಈ ಜನರ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ, ಆ ರಾಶಿಯವರು ಯಾರು ಎಂದು ನೋಡೋಣ ಬನ್ನಿ...

ವೃಷಭ ರಾಶಿ

ವೃಷಭ ರಾಶಿಯವರಿಗೆ ಶನಿಯ ಉದಯವು ಬಹಳ ಶುಭ ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಬಹಳ ದಿನಗಳಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ಹೊಸ ಆದಾಯದ ಮೂಲಗಳು ತೆರೆದುಕೊಳ್ಳಲಿದೆ. ಹಳೆಯ ಹೂಡಿಕೆಗಳು ಲಾಭವನ್ನು ನೀಡಲಿವೆ. ಸ್ನೇಹಿತರು ಮತ್ತು ಕುಟುಂಬ ಸದಸ್ಯರಿಂದ ನಿಮಗೆ ಬೆಂಬಲ ಸಿಗುವಂತಹ ಸಮಯ ಇದಾಗಿದೆ.

ಮಿಥುನ ರಾಶಿ

ಮಿಥುನ ರಾಶಿಯವರಿಗೆ ಈ ಸಮಯವು ತುಂಬಾ ಒಳ್ಳೆಯದಾಗಲಿದೆ. ವೃತ್ತಿ ಜೀವನದಲ್ಲಿ ಅನೇಕ ಪ್ರಗತಿಯನ್ನು ಕಾಣಲಿದ್ದೀರಿ. ಕೆಲಸದಲ್ಲಿ ಸಂಬಳ, ಬಡ್ತಿ ಹೆಚ್ಚಾಗಲಿದೆ. ಸಾಮಾಜಿಕ ಗೌರವಗಳು ಹೆಚ್ಚಾಗಲಿದ್ದು, ಉದ್ಯೋಗದಲ್ಲಿರುವವರು ಸ್ಥಿರತೆಯನ್ನು ಕಾಣಲಿದ್ದೀರಿ. ಈ ಸಮಯವು ತುಂಬಾ ಆಶಾದಾಯಕವಾಗಲಿದ್ದು, ಅಂದುಕೊಂಡ ಕೆಲಸಗಳನ್ನು ಮಾಡಿ ಮುಗಿಸಲಿದ್ದೀರಿ. ಕುಟುಂಬದಲ್ಲಿ ಸಂತೋಷದ ವಾತಾವರಣವಿರಲಿದೆ.

ಸಿಂಹ ರಾಶಿ

ಸಿಂಹ ರಾಶಿಯವರಿಗೆ ಶನಿಯ ಉದಯವು ಸಮಾಧಾನ ಮತ್ತು ಸ್ಥಿರತೆಯನ್ನು ತರಲಿದೆ. ಆರ್ಥಿಕ ಪರಿಸ್ಥಿತಿಗಳು ಸುಧಾರಿಸಲಿವೆ. ಕುಟುಂಬದಲ್ಲಿ ಸಂತೋಷದ ವಾತಾವರಣವಿರಲಿದೆ. ಸಂಗಾತಿಯೊಂದಿಗೆ ದೂರ ಪ್ರಯಾಣ ಸಾಧ್ಯತೆ ಇದೆ. ಉದ್ಯೋಗ ಹುಡುಕುತ್ತಿರುವವರಿಗೆ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ. ವಿದ್ಯಾರ್ಥಿಗಳಿಗೆ ಓದುವಲ್ಲಿ ಆಸಕ್ತಿ ಹೆಚ್ಚಾಗಲಿದೆ (ಏಜೆನ್ಸೀಸ್​).
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು/ ಪಂಚಾಂಗಗಳು/ ನಂಬಿಕೆಗಳು/ ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್​ಸೈಟ್​ ಜವಾಬ್ದಾರರಾಗಿರುವುದಿಲ್ಲ.