Astrology: ಡಿಸೆಂಬರ್ ತಿಂಗಳಿನಲ್ಲಿ ಗ್ರಹಗಳ ರಾಜ ಸೂರ್ಯನು ಮಂಗಳದಿಂದ ಆಳಲ್ಪಡುವ ವೃಶ್ಚಿಕ ರಾಶಿಯಲ್ಲಿದ್ದಾನೆ. ಸೂರ್ಯನು ವರ್ಷದ ಕೊನೆಯ ಸಂಚಾರವನ್ನು ಮಾಡುತ್ತಾನೆ. ಹಾಗಾಗಿ ಡಿಸೆಂಬರ್ 16, 2025 ರ ಮಂಗಳವಾರ ಬೆಳಿಗ್ಗೆ 4:26 ಕ್ಕೆ ವೃಶ್ಚಿಕ ರಾಶಿಯನ್ನು ಬಿಟ್ಟು ಗುರುವಿನ ಆಳ್ವಿಕೆಯ ಧನು ರಾಶಿಯನ್ನು ಪ್ರವೇಶಿಸುತ್ತಾನೆ.
ಆತ್ಮವಿಶ್ವಾಸ, ಶಕ್ತಿ ಮತ್ತು ನಾಯಕತ್ವ ಕೌಶಲ್ಯಗಳನ್ನು ಹೆಚ್ಚಿಸುವ ಸೂರ್ಯನ ಈ ಸಂಚಾರವು 3 ರಾಶಿಚಕ್ರ ಚಿಹ್ನೆಗಳ ಮೇಲೆ ನೇರ ಪರಿಣಾಮವನ್ನು ಬೀರುತ್ತದೆ. ವರ್ಷದ ಕೊನೆಯಲ್ಲಿ ಯಾವ ರಾಶಿಚಕ್ರಗಳು ಸೂರ್ಯನ ಆಶೀರ್ವಾದ ಪಡೆಯುತ್ತಾನೆ ಎಂದು ನೋಡೋಣ ಬನ್ನಿ...
ಮೇಷ ರಾಶಿ
ಮೇಷ ರಾಶಿಯಲ್ಲಿ ಸೂರ್ಯನ ಸಂಚಾರವು ಈ ಜನರಿಗೆ ಆರ್ಮವಿಶ್ವಾಸವನ್ನು ಬಲಪಡಿಸುತ್ತದೆ. ಇದು ಅವರ ಇಚ್ಛೆಯಂತೆ ಕೆಲಸ ಮಾಡಲು ಸಹಾಯ ಮಾಡುತ್ತದೆ. ಜನರು ತಮ್ಮದೇ ಆದ ಜವಾಬ್ದಾರಿಯ ಮೇಲೆ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸುತ್ತಾರೆ. ಹೊಸ ವಿಷಯಗಳಲ್ಲಿ ಕೆಲಸ ಮಾಡುವವರಿಗೆ ಉತ್ತಮ ಲಾಭದ ಸಮಯ ಇದಾಗಿದೆ. ಅರ್ಧದಲ್ಲೇ ಸಿಲುಕಿಕೊಂಡಿದ್ದ ಹಣ ಮರಳಿ ಪಡೆಯುತ್ತೀರಿ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಸೂರ್ಯನ ಸಂಚಾರವು ಒಳ್ಳೆಯ ಸಮಯಗಳನ್ನು ತರುತ್ತದೆ. ಕೆಲಸದಲ್ಲಿ ಮನ್ನಣೆ, ಹಾಗೂ ಸ್ಥಾನಮಾನವನ್ನು ಹೆಚ್ಚಿಸುವಂತೆ ಮಾಡುತ್ತದೆ. ಮನೆಯ ದೊಡ್ಡ ಜವಬ್ದಾರಿಗಳು ನಿಮ್ಮ ಹೆಗಲ ಮೇಲೆ ಬೀಳಲಾರಂಭಿಸುತ್ತದೆ.ಪ್ರೀತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಸಕರಾತ್ಮಕ ಬೆಳವಣಿಗೆಗಳು ಹೆಚ್ಚಾಗುತ್ತದೆ. ನಿಮ್ಮ ಜೀವನದಲ್ಲಿ ಸಂತೋಷದ ವಾತಾವರಣ ಇರಲಿದೆ.
ಧನು ರಾಶಿ
ಸೂರ್ಯನ ಸಂಚಾರವು ಧನು ರಾಶಿಯವರಿಗೆ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಇದು ನಿಮ್ಮ ವ್ಯಕ್ತಿತ್ವವನ್ನು ಸುಂದರವಾಗಿಸಲು ಸಹಾಯ ಮಾಡುತ್ತದೆ. ನಿಮ್ಮ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವು ಹೆಚ್ಚಾಗುತ್ತದೆ. ಉದ್ಯೋಗ ಹುಡುಕುವವರಿಗೆ ಒಳ್ಳೆಯ ಸಮಯ ಇದಾಗಿದೆ. ಹೊಸ ವ್ಯವಹಾರಗಳನ್ನು ಪ್ರಾರಂಭಿಸುವವರು ಸ್ವಲ್ಪ ಜಾಗರೂಕರಾಗಿರುವುದು ಒಳ್ಳೆಯದು. ಸಾಮಾಜಿಕ ಕ್ಷೇತ್ರದಲ್ಲಿ ಜನರ ಗೌರವ ಹೆಚ್ಚಾಗುವುದರ ಜೊತೆಗೆ ಹಣದ ಕೊರತೆ ಮಾಯವಾಗುತ್ತದೆ. ಹಾಗೆಯೇ ಮನಸ್ಸು ಶಾಂತವಾಗಿರುತ್ತದೆ (ಏಜೆನ್ಸೀಸ್).
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ “ವಿಜಯವಾಣಿ ಡಾಟ್ ನೆಟ್” ಜವಾಬ್ದಾರರಾಗಿರುವುದಿಲ್ಲ.