Skin Care Tips: ಮುಖದಲ್ಲಿ ತಕ್ಷಣದ ಹೊಳಪು ಹಾಗೂ ನೈಸರ್ಗಿಕ ಕಳೆ ಪಡೆಯಲು ದುಬಾರಿ ಬ್ಯೂಟಿ ಪ್ರಾಡಕ್ಟ್‌ಗಳೇ ಬೇಕು ಎಂದೇನಿಲ್ಲ; ನಮ್ಮ ಅಡುಗೆಮನೆಯಲ್ಲೇ ಸಿಗುವ ಕೆಲವೇ ಕೆಲವು ನೈಸರ್ಗಿಕ ಪದಾರ್ಥಗಳಿಂದ ಸುಲಭವಾಗಿ ಇನ್‌ಸ್ಟೆಂಟ್ ಗ್ಲೋ ಪಡೆಯಬಹುದು. ಮುಖದ ಕಾಂತಿಯನ್ನು ಹೆಚ್ಚಿಸಿ, ಚರ್ಮವನ್ನು ಸಾಫ್ಟ್ ಹಾಗೂ ಗ್ಲೋಯಿಂಗ್ ಆಗಿಸುವ ಸರಳ ಫೇಸ್ ಪ್ಯಾಕ್ ರೆಸಿಪಿ ಇಲ್ಲಿದೆ.
ಬೇಕಾಗುವ ಸಾಮಗ್ರಿಗಳು
ಮಾಡುವ ವಿಧಾನ
ಒಂದು ಸಣ್ಣ ಬೌಲ್‌ನಲ್ಲಿ ಕಡಲೆಹಿಟ್ಟು, ಅರಿಶಿನ, ಮೊಸರು ಮತ್ತು ಜೇನುತುಪ್ಪವನ್ನು ಸೇರಿಸಿ ಗಂಟಿಲ್ಲದಂತೆ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಮುಖವನ್ನು ಶುದ್ಧ ನೀರಿನಿಂದ ತೊಳೆದು ಒಣಗಿಸಿಕೊಳ್ಳಿ. ತಯಾರಿಸಿದ ಪೇಸ್ಟ್ ಅನ್ನು ಮುಖ ಮತ್ತು ಕತ್ತಿನ ಭಾಗಕ್ಕೆ ಸಮನಾಗಿ ಹಚ್ಚಿ. 15 ರಿಂದ 20 ನಿಮಿಷಗಳ ಕಾಲ ಒಣಗಲು ಬಿಡಿ.
ನಂತರ ಉಗುರುಬೆಚ್ಚಗಿನ ನೀರಿನಿಂದ ವೃತ್ತಾಕಾರದಲ್ಲಿ ಮೃದುವಾಗಿ ಮಸಾಜ್ ಮಾಡುತ್ತಾ ಮುಖ ತೊಳೆಯಿರಿ. ವಾರಕ್ಕೆ 2 ಬಾರಿ ಈ ಪ್ಯಾಕ್ ಬಳಸುವುದರಿಂದ ಚರ್ಮದ ಮೇಲಿರುವ ಸತ್ತ ಜೀವಕೋಶಗಳು ನಿವಾರಣೆಯಾಗಿ ಮುಖಕ್ಕೆ ನೈಸರ್ಗಿಕ ಗ್ಲೋ ಸಿಗುತ್ತದೆ (ಏಜೆನ್ಸೀಸ್).
ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ವಿಜಯವಾಣಿ ಡಾಟ್ ನೆಟ್” ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.