ಬೆಂಗಳೂರು: ಆಡನ್ನು ದೇವರಾಗಿ ಪೂಜೆ ಮಾಡಿದಾಗ ಏನೆಲ್ಲಾ ಆಗುತ್ತದೆ ಎನ್ನುವ ಕಥಾಹಂದರ ಹೊಂದಿರುವ ‘ಆಡೇ ನಮ್ God’ ಸಿನಿಮಾ ಇದೇ ಶುಕ್ರವಾರ(ಅ.6) ಬಿಡುಗಡೆ ಆಗುತ್ತಿದೆ.
ಕನ್ನಡ ಚಿತ್ರರಂಗದಲ್ಲಿ ಪಂಚಮವೇದ, ಶ್ರೀಗಂಧ, ಅರಗಿಣಿ, ಅರುಣೋದಯ, ರಂಗೋಲಿ, ಅಂಡಮಾನ್, ಮುಂಜಾನೆ ಮಂಜು, ಮುಸುಕು ಅಂತಹ ಹಿಟ್ ಸಿನಿಮಾಗಳನ್ನು ಕೊಟ್ಟ ಪಿ.ಎಚ್. ವಿಶ್ವನಾಥ್. ಅಂಬರೀಶ್, ಶಿವರಾಜ್ ಕುಮಾರ್, ರಮೇಶ್ ಅರವಿಂದ್ ಅಂತಹ ಸ್ಟಾರ್ ನಟರಿಗೆ ಸಿನಿಮಾ ನಿರ್ದೇಶನ ಮಾಡಿ ಸಕ್ಸಸ್ ಕಂಡಿರುವ ಇವರು ವರ್ಷಗಳ ಬಳಿಕ ವಿಭಿನ್ನ ಸಿನಿಮಾದೊಂದಿಗೆ ಪ್ರೇಕ್ಷಕರ ಮುಂದೆ ಬರ್ತಾ ಇದ್ದಾರೆ. ಇತ್ತೀಚೆಗಷ್ಟೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ನಿರ್ದೇಶಕ ಪಿ.ಎಚ್.ವಿಶ್ವನಾಥ್ ಚಿತ್ರದ ಬಗ್ಗೆ, 'ಇವತ್ತಿನ ಟ್ರೆಂಡ್ಗೆ ಸರಿಯಾಗುವಂತಹ ಸಿನಿಮಾ ಇದು. ಗಂಭೀರವಾದ ವಿಷಯವನ್ನು ಲಘು ಹಾಸ್ಯದೊಂದಿಗೆ ಹೇಳಿದ್ದೇವೆ. ಹೊಸ ಹುಡುಗರು ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ' ತಿಳಿಸಿದರು.
ರಾಮ ರಾಮ ರೇ ಸಿನಿಮಾ ಖ್ಯಾತಿಯ ನಟರಾಜ್, ಮಂಜುನಾಥ್ ಜಂಬೆ, ಅಜಿತ್ ಬೊಪ್ಪನಹಳ್ಳಿ, ಅನೂಪ್ ಶೂನ್ಯ, ಸಾರಿಕ ರಾವ್, ಬಿ ಸುರೇಶ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಪಿ.ಕೆ.ಎಚ್ ದಾಸ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು ಸಂಕಲನ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ, ಅಕ್ಷಯ್ ವಿಶ್ವನಾಥ್ ಚಿತ್ರಕಥೆ-ಸಹ ನಿರ್ದೇಶನ ‘ಆಡೇ ನಮ್ God’ ಚಿತ್ರಕ್ಕಿದೆ.