Actress Childhood Photo : ಸಿನಿಪ್ರಿಯರಿಗೆ ಹೀರೋ ಮತ್ತು ಹೀರೋಯಿನ್ಗಳ ವೈಯಕ್ತಿಕ ಮಾಹಿತಿ ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಅವರು ಬಳಸುವ ಕಾರುಗಳು, ದಿನನಿತ್ಯ ಜೀವನದಲ್ಲಿ ಅವರ ಹವ್ಯಾಸಗಳು, ಧರಿಸುವ ಬಟ್ಟೆ, ಮೊಬೈಲ್ ಹಾಗೂ ವಾಚ್ ಬೆಲೆ ಎಷ್ಟು? ವಾಸಿಸುವ ಮನೆ ಎಷ್ಟು ಬೆಲೆ ಬಾಳುತ್ತದೆ? ಮತ್ತು ಯಾವ ಯಾವ ವಸ್ತುಗಳನ್ನು ಆಗಾಗ ಬಳಕೆ ಮಾಡುತ್ತಾರೆ? ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳಲು ಬಯಸುತ್ತಾರೆ. ಇದಿಷ್ಟೇ ಅಲ್ಲದೆ, ಬಾಲ್ಯದಲ್ಲಿ ಹೇಗಿದ್ದರು? ಸಿನಿಮಾಗೆ ಬರುವ ಮುಂಚೆ ಹೇಗೆ ಕಾಣುತ್ತಿದ್ದರು ಎಂದು ತಿಳಿದುಕೊಳ್ಳುವ ಕುತೂಹಲವೂ ಜಾಸ್ತಿ ಇರುತ್ತದೆ.
ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಪುಟ್ಟ ಹುಡುಗಿಯ ಫೋಟೋವೊಂದು ವೈರಲ್ ಆಗಿದೆ. ಆ ಬಾಲಕಿ ಯಾರೆಂದು ತಿಳಿದು ನೆಟ್ಟಿಗರು ಒಂದು ಕ್ಷಣ ಹುಬ್ಬೇರಿಸಿದ್ದಾರೆ. ಏಕೆಂದರೆ, ವೈರಲ್ ಫೋಟೋದಲ್ಲಿರುವುದು ಬೇರೆ ಯಾರೂ ಅಲ್ಲ ನಮ್ಮ ಕನ್ನಡತಿ ಹಾಗೂ ವಿಶ್ವ ಮಟ್ಟದಲ್ಲಿ ಹೆಸರು ಮಾಡಿದ ನಟಿ ಅನುಷ್ಕಾ ಶೆಟ್ಟಿ. ತಮ್ಮ ಕುಟುಂಬದೊಂದಿಗೆ ಇರುವ ಬಾಲ್ಯದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಇದನ್ನೂ ಓದಿ: ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಅಧಿಕೃತ ನಿವಾಸದಲ್ಲೇ ಹಲ್ಲೆ: ವ್ಯಕ್ತಿಯ ಬಂಧನ! Delhi CM Rekha Gupta
ಅನುಷ್ಕಾ ಬಗ್ಗೆ ವಿಶೇಷವಾಗಿ ಹೇಳಬೇಕಿಲ್ಲ, ತೆಲುಗು ಮತ್ತು ತಮಿಳಿನಲ್ಲಿ ಅತ್ಯಂತ ಜನಪ್ರಿಯ ನಟಿಯಾಗಿರುವ ಅನುಷ್ಕಾ ಶೆಟ್ಟಿ, ರಜನಿಕಾಂತ್, ಸೂರ್ಯ, ವಿಜಯ್, ಪ್ರಭಾಸ್, ಮಹೇಶ್ ಬಾಬು ಮತ್ತು ಅಜಿತ್ ಸೇರಿದಂತೆ ಸ್ಟಾರ್ ನಟರ ಜೊತೆ ನಟಿಸಿದ್ದಾರೆ. ತಮ್ಮ ನಟನೆ ಮತ್ತು ಮಾದಕ ನೋಟದ ಮೂಲಕ ತಮ್ಮದೇಯಾದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ.
ಅರುಂಧತಿ, ಭಾಗಮತಿ ಸೇರಿದಂತೆ ಮಹಿಳಾ ಪ್ರಧಾನ ಸಿನಿಮಾಗಳಲ್ಲೂ ನಟನೆ ಮಾಡಿದ್ದಾರೆ. ಬಾಹುಬಲಿ ಸಿನಿಮಾದಲ್ಲಿ ಅನುಷ್ಕಾ ಅವರ ನಟನೆಯು ಅವರಿಗೆ ಜಾಗತಿಕ ಮನ್ನಣೆಯನ್ನು ತಂದುಕೊಟ್ಟಿದೆ. ಬಾಹುಬಲಿ ಸಿನಿಮಾ 1000 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಇಂದಿಗೂ ಈ ಸಿನಿಮಾ ದಾಖಲೆ ಮುರಿಯಲು ಬೇರೆ ಸಿನಿಮಾಗಳಿಗೆ ಸಾಧ್ಯವಾಗಿಲ್ಲ. ಅನುಷ್ಕಾ ಅವರಿಗೆ 41 ವರ್ಷ ವಯಸ್ಸಾಗಿದ್ದರೂ ಇಂದಿಗೂ ಮದುವೆಯಾಗದೇ ಬ್ಯಾಚುಲರ್ ಆಗಿಯೇ ಉಳಿದಿದ್ದಾರೆ.
ಸಿನಿಮಾ ವಿಚಾರಕ್ಕೆ ಬಂದರೆ, ಸದ್ಯಕ್ಕೆ ಘಾಟಿ ಹೆಸರಿನ ಸಿನಿಮಾದಲ್ಲಿ ಬಿಜಿಯಾಗಿದ್ದಾರೆ. ಈ ಸಿನಿಮಾ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಬಿಡುಗಡೆಗೆ ಸಜ್ಜಾಗುತ್ತಿದೆ. (ಏಜೆನ್ಸೀಸ್)