ಮುಂಬೈ: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಅತ್ಯಾಚಾರ ಮಾಡುವ ಅನೇಕ ಘಟನೆಗಳ ಬಗ್ಗೆ ಕೇಳಿದ್ದೇವೆ. ಇದೀಗ ಇಂತದ್ದೇ ಒಂದು ಘಟನೆ ಬಾಲಿವುಡ್ನಲ್ಲಿ ಕೇಳಿಬಂದಿದೆ. ನಿರ್ದೇಶಕ ಆಯುಷ್ ತಿವಾರಿಯಿಂದ ನಿರಂತರವಾಗಿ ಅತ್ಯಾಚಾರಕ್ಕೊಳಗಾಗಿರುವುದಾಗಿ ನಟಿಯೊಬ್ಬಳು ದೂರು ದಾಖಲಿಸಿದ್ದಾರೆ.
ಆಯುಷ್ ತಿವಾರಿ ಅವರು ನನಗೆ ಬಾಲಿವುಡ್ ಸಿನಿಮಾ ಮತ್ತು ಧಾರವಾಹಿಗಳಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿದ್ದರು. ಅದೇ ಕಾರಣವನ್ನು ಇಟ್ಟುಕೊಂಡು ಎರಡು ವರ್ಷದ ಹಿಂದಿನಿಂದಲೂ ನನ್ನ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ. ಮದುವೆಯಾಗುವುದಾಗಿಯೂ ಹೇಳಿದ್ದರು. ಕಳೆದ ಜುಲೈನಲ್ಲಿ ನಾನು ಗರ್ಭವತಿಯಾದೆ. ಆದರೆ ಅದರ ಜವಾಬ್ದಾರಿಯನ್ನು ಹೊರಲು ಆಯುಷ್ ಸಿದ್ಧವಿರಲಿಲ್ಲ. ಅವರ ಸ್ನೇಹಿತರ ಎದುರು ನನ್ನನ್ನು ಅವಮಾನಿಸಿದರು. ಮದುವೆಯಾಗುವುದಿಲ್ಲ ಎಂದು ಬೈದರು ಎಂದು ನಟಿ ಆರೋಪಿಸಿದ್ದಾರೆ.
ಇದನ್ನೂ ಓದಿ: ‘ಯಾರ ಮರ್ಜಿಯಲ್ಲಿ ಆ ಸ್ಥಾನದಲ್ಲಿ ಕುಳಿತಿದ್ದಾರೆ ಎಂಬುದನ್ನ ಮರೆತಿದ್ದಾರೆ’ ಸಿಎಂ ವಿರುದ್ಧ ವಿಶ್ವನಾಥ್ ಅಸಮಾಧಾನ
ಈ ವಿಚಾರವಾಗಿ ನವೆಂಬರ್ 16ರಂದು ಮುಂಬೈನ ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರನ್ನು ಹಿಂಪಡೆಯುವಂತೆ ಆಯುಷ್ ಬೆದರಿಸಿದ್ದು, ದೂರು ವಾಪಾಸು ತೆಗೆದುಕೊಳ್ಳದಿದ್ದರೆ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆಯನ್ನೂ ಕೊಟ್ಟಿರುವುದಾಗಿ ನಟಿ ದೂರಿದ್ದಾರೆ. ಈ ನಟಿ ಕಿರುತೆರೆ ಮತ್ತು ವೆಬ್ ಸಿರೀಸ್ಗಳಲ್ಲಿ ನಟಿಸಿರುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್)