ಸಿನಿವಾಣಿ

ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ದರ್ಶನ್‌ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ರಕ್ಷಿತಾ ಪ್ರೇಮ್‌ ಅವರು, ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು, ಇದರ ಬಗ್ಗೆ ಏನು ಮಾತಾನಾಡುವುದಿಲ್ಲ. ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿಸಿಗಲಿ ಎಂದು ಹೇಳಿದರು. ದರ್ಶನ್ ಆರಾಮಾಗಿದ್ದಾರಾ ಎಂಬ ಪ್ರಶ್ನೆಗೆ ಇಂತಹ ಪರಿಸ್ಥಿತಿಯಲ್ಲಿ ಯಾರಾದರೂ ಆರಾಮಾಗಿ ಇರುತ್ತಾರಾ ಎಂದು ಭಾವುಕರಾಗಿ ಪ್ರಶ್ನಿಸಿದರು.

ನಿರ್ದೇಶಕ ಜೋಗಿ ಪ್ರೇಮ್‌ ಮಾತನಾಡಿ, ನ್ಯಾಯಾಲಯದಲ್ಲಿರುವ ಕಾರಣ ಈ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.