ರಶ್ಮಿಕಾ ಮಂದಣ್ಣ, ನಯನತಾರಾ, ಶ್ರದ್ಧಾ ಶ್ರೀನಾಥ್ ಸೇರಿ ದಕ್ಷಿಣದ ಹಲವಾರು ನಟಿಯರು ಬಾಲಿವುಡ್‌ಗೆ ಹಾರುತ್ತಿದ್ದಾರೆ. ಇದೀಗ ತಮಿಳು, ತೆಲುಗಿನಲ್ಲೂ ತಮ್ಮದೇ ಛಾಪು ಮೂಡಿಸಿರುವ ‘ಪ್ರೇಮಂ’ ಖ್ಯಾತಿಯ ಮಲಯಾಳಂ ನಟಿ ಸಾಯಿ ಪಲ್ಲವಿ ಕೂಡ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ತೆರೆಗೆ ಬಂದ ‘ವಿರಾಟ ಪರ್ವಂ’ ಮತ್ತು ‘ಗಾರ್ಗಿ’ ಚಿತ್ರಗಳ ಬಳಿಕ ಸಾಯಿ ಪಲ್ಲವಿ ಯಾವುದೇ ಚಿತ್ರದಲ್ಲಿ ನಟಿಸಿಲ್ಲ. ಸದ್ಯ ಅವರು ತಮಿಳು ನಟ ಶಿವಕಾರ್ತಿಕೇಯನ್ ಅವರ ಹೊಸ ಚಿತ್ರದಲ್ಲಿ ಬಿಜಿಯಿದ್ದು, ಅದರ ನಡುವೆಯೇ ಬಾಲಿವುಡ್‌ಗೆ ಪದಾರ್ಪಣೆ ಮಾಡಲು ತಯಾರಿ ನಡೆಸಿದ್ದಾರೆ. ಇದೊಂದು ರೊಮ್ಯಾಂಟಿಕ್ ಲವ್‌ಸ್ಟೋರಿಯಾಗಿದ್ದು ಸುನೀಲ್ ಪಾಂಡೆ ಆ್ಯಕ್ಷನ್-ಕಟ್ ಹೇಳಲಿದ್ದಾರೆ.
ಇದನ್ನೂ ಓದಿ : ‘ಜವಾನ್’ ಚಿತ್ರದಲ್ಲಿ ಬಾಲಿವುಡ್ ಮತ್ತು ಸೌತ್ ಸಿನಿಮಾ ಇಂಡಸ್ಟ್ರಿಯ ಸಂಗಮ; ಚಿತ್ರದ ವಿಮರ್ಶೆ ತಿಳಿಸಿದ ನಟ ಅಲ್ಲು ಅರ್ಜುನ್
ಯಶ್ ರಾಜ್ ಫಿಲಂಸ್ ಬ್ಯಾನರ್‌ನಲ್ಲಿ ಈಗಾಗಲೇ ಒಂದು ಚಿತ್ರದಲ್ಲಿ ನಟಿಸಿರುವ ಜುನೈದ್ ಖಾನ್, ಅದರ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಅದಕ್ಕೂ ಮುನ್ನವೇ ಎರಡನೇ ಚಿತ್ರದಲ್ಲಿ ಅವಕಾಶ ಸಿಕ್ಕಿರುವ ಸಂಭ್ರಮ ಅವರದು. ಆದರೆ, ಜುನೈದ್ ಮತ್ತು ಸಾಯಿ ಪಲ್ಲವಿ ಕಾಂಬಿನೇಷನ್ ಚಿತ್ರದ ಬಗ್ಗೆ ಇದುವರೆಗೂ ಅಧಿಕೃತ ಘೋಷಣೆಯಾಗಿಲ್ಲ.
-ಏಜೆನ್ಸೀಸ್