ಬೆಂಗಳೂರು: ನೀನಾಸಂ ಮಂಜು ನಿರ್ದೇಶನದ ‘ಕನ್ನೇರಿ’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ನೈಜ ಘಟನೆ ಆಧರಿತ ಮಹಿಳಾ ಪ್ರಧಾನ ಚಿತ್ರದ ಹಾಡನ್ನು ನಟಿ ಶ್ರುತಿ ಬಿಡುಗಡೆ ಮಾಡಿ ತಂಡಕ್ಕೆ ಶುಭ ಕೋರಿದ್ದಾರೆ. ‘ಬೆಟ್ಟದ ಕಣಿವೆಗಳ..’ ಎಂಬ ಜನಪದ ಹಾಡಿಗೆ ಹೊಸ ಟಚ್ ನೀಡಿ ಬಿಡುಗಡೆ ಮಾಡಲಾಗಿದೆ. ಈ ಚಿತ್ರದಲ್ಲಿ ಮಧುಸೂದನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.
ಇನ್ನುಳಿದಂತೆ ಅನಿತಾ ಭಟ್, ಎಂ.ಕೆ. ಮಠ್, ಅರುಣ್ ಸಾಗರ್, ಕರಿಸುಬ್ಬು, ಸರ್ದಾರ್ ಸತ್ಯ ಪಾತ್ರವರ್ಗದಲ್ಲಿದ್ದಾರೆ. ಬುಡ್ಡಿ ದೀಪ ಸಿನಿಮಾ ಹೌಸ್ ಬ್ಯಾನರ್ ಅಡಿಯಲ್ಲಿ ಪಿಪಿ ಹೆಬ್ಬಾರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಣೇಶ್ ಹೆಗಡೆ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ, ಸುಜೀತ್ ನಾಯಕ್ ಸಂಕಲನ ಚಿತ್ರಕ್ಕಿದೆ.