ಮುಂಬೈ: ಕರೊನಾ ಲಾಕ್ಡೌನ್ ಬಳಿಕ ಬಾಲಿವುಡ್ನ ಮೊದಲ ಸಿನಿಮಾವೊಂದು ಚಿತ್ರಮಂದಿರದಲ್ಲಿ ಬಿಡುಗಡೆ ಆಗಲು ಸಿದ್ಧತೆ ಮಾಡಿಕೊಂಡಿದೆ. ಅಷ್ಟೇ ಅಲ್ಲ ರಿಲೀಸ್ ದಿನಾಂಕವನ್ನೂ ಘೋಷಿಸಿಕೊಂಡಿದೆ. ಅದೇ ಲಕ್ಷ್ಮೀ ಬಾಂಬ್!
ಬಾಲಿವುಡ್ನ ಸ್ಟಾರ್ ನಟ ಅಕ್ಷಯ್ ಕುಮಾರ್ ನಟನೆಯ ಲಕ್ಷ್ಮೀ ಬಾಂಬ್ ಸಿನಿಮಾ ಸದ್ಯ ಯಾರೂ ಮಾಡದ ದಾಖಲೆಯನ್ನು ಬರೆಯಲು ಸಜ್ಜಾಗಿದೆ. ಕರೊನಾ ಹಾವಳಿ ನಡುವೆಯೂ ಚಿತ್ರಮಂದಿರದಲ್ಲಿಯೇ ಈ ಸಿನಿಮಾ ಪ್ರದರ್ಶನಕ್ಕೆ ಸಜ್ಜಾಗಿದೆ.
ನವೆಂಬರ್ 9ರಂದು ಡಿಸ್ನಿ ಹಾಟ್ಸ್ಟಾರ್ ಓಟಿಟಿ ವೇದಿಕೆಯಲ್ಲಿ ಲಕ್ಷ್ಮೀ ಬಾಂಬ್ ಸಿನಿಮಾ ಬಿಡುಗಡೆಯಾಗುತ್ತಿದ್ದು, ಇದರ ಜತೆಗೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಅರಬ್ ರಾಷ್ಟ್ರಗಳಲ್ಲಿನ ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ಆವತ್ತೇ ಈ ಚಿತ್ರ ತೆರೆಕಾಣಲಿದೆ.
ರಾಘವ್ ಲಾರೆನ್ಸ್ ಈ ಸಿನಿಮಾ ನಿರ್ದೇಶನ ಮಾಡಿದ್ದು, ಅಕ್ಷಯ್ ಕುಮಾರ್ ಅವರ ಹೋಮ್ ಬ್ಯಾನರ್ ಕೇಪ್ ಆಫ್ ಗುಡ್ ಫಿಲಂಸ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. ತುಷಾರ್ ಎಂಟರ್ಟೈನ್ಮೆಂಟ್ಸ್ ಮತ್ತು ಶಬೀನಾ ಎಂಟರ್ಟೈನ್ಮೆಂಟ್ ನಿರ್ಮಾಣದಲ್ಲಿ ಪಾಲುದಾರಿಕೆ ಹೊಂದಿವೆ. (ಏಜೆನ್ಸೀಸ್)