Amaran : ಕಾಲಿವುಡ್ ಸೂಪರ್ಸ್ಟಾರ್ ಶಿವಕಾರ್ತಿಕೇಯನ್ ಹಾಗೂ ಸರಳ ಸುಂದರಿ ಸಾಯಿ ಪಲ್ಲವಿ ನಟನೆಯ ಅಮರನ್ ಸಿನಿಮಾ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸಿದೆ. ಕಡಿಮೆ ಬಜೆಟ್ನಲ್ಲಿ ತಯಾರಾದ ಈ ಸಿನಿಮಾ ಇಂದು 300 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ತಮಿಳು ಚಿತ್ರರಂಗದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಈಗಲೂ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಇನ್ನು ಸಿನಿಮಾ ನೋಡದವರು ಯಾವಾಗ ಒಟಿಟಿಯಲ್ಲಿ ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿದ್ದಾರೆ. ಅವರಿಗೀಗ ಸಿಹಿ ಸುದ್ದಿ ಸಿಕ್ಕಿದೆ. ಅಮರನ್ ಚಿತ್ರದ ಒಟಿಟಿ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಅಮರನ್ ಸಿನಿಮಾವನ್ನು ನೆಟ್ಫ್ಲಿಕ್ಸ್ ಒಟಿಟಿ ಸಂಸ್ಥೆ ಭಾರಿ ಮೊತ್ತಕ್ಕೆ ಖರೀದಿ ಮಾಡಿದೆ. ಇದೇ ಡಿಸೆಂಬರ್ 5ರಂದು ತಮಿಳು, ಕನ್ನಡ, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಲಿದೆ.
ಇದನ್ನೂ ಓದಿ: ಗಂಡಸರು ಬಿಸಿ ನೀರಿನಲ್ಲಿ ಸ್ನಾನ ಮಾಡಬಾರದು! ಆಘಾತಕಾರಿ ಸಂಗತಿ ಬಿಚ್ಚಿಟ್ಟ ಆರೋಗ್ಯ ತಜ್ಞರು | Hot Water
ಅಂದಹಾಗೆ ಅಮರನ್ ಸಿನಿಮಾ ಅಕ್ಟೋಬರ್ 14ರಂದು ಬಿಡುಗಡೆಯಾಯಿತು. ಇಂದಿಗೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಒಟಿಟಿಯಲ್ಲಿ ಬಿಡುಗಡೆಯಾದರು ಕೂಡ ಥಿಯೇಟರ್ನಲ್ಲಿ 50 ದಿನ ಪೂರೈಸಲಿದೆ. ಈ ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಬಾಕ್ಸ್ಆಫೀಸ್ನಲ್ಲಿ ಸಖತ್ ಸದ್ದು ಮಾಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 44ನೇ ರಾಷ್ಟ್ರೀಯ ರೈಫಲ್ಸ್ ಬೆಟಾಲಿಯನ್‌ಗೆ ನಿಯೋಜನೆಗೊಂಡಾಗ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ತಮ್ಮ ಶೌರ್ಯಕ್ಕಾಗಿ ಮರಣೋತ್ತರ ಅಶೋಕ ಚಕ್ರವನ್ನು ಪಡೆದ ಮೇಜರ್ ಮುಕುಂದ್ ವರದರಾಜನ್ ಅವರ ನೈಜ-ಜೀವನದ ಕಥೆ ಇದಾಗಿದೆ. ರಾಜ್ಕುಮಾರ್ ಪೆರಿಸ್ವಾಮಿ ನಿರ್ದೇಶಿಸಿದ್ದು, ಕಮಲ್ ಹಾಸನ್ ಅವರ ರಾಜ್ ಕಮಲ್ ಫಿಲ್ಮ್ಸ್ ಸಂಸ್ಥೆ ಬಂಡವಾಳ ಹೂಡಿದೆ. (ಏಜೆನ್ಸೀಸ್)