ಸಿನಿವಾಣಿ

ಡಾಲಿ ಧನಂಜಯ್​ ನಟನೆಯ ಹೆಡ್ ಬುಷ್ ಸಿನಿಮಾದ ಪ್ರಚಾರ ಮಾಡುತ್ತಿದ್ದವರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ನಟ ಡಾಲಿ ಧನಂಜಯ್​ ಅಭಿನಯದ ಹೆಡ್ ಬುಷ್ ಸಿನಿಮಾದ ಪ್ರಚಾರ ಮಾಡುತ್ತಿದ್ದವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಐದು ಮಂದಿ ಅಪರಿಚಿತರ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ. ಕಾರು ಹಾಗು ಬೈಕ್​ಗಳಲ್ಲಿ ಬಂದು, ಹೆಡ್​ ಬುಷ್​ ಸಿನಿಮಾದ ಪೋಸ್ಟರ್​ಗಳನ್ನು ಹಿಡಿದು, ಬೆಳಗ್ಗೆ 11 ಗಂಟೆ ಸುಮಾರಿಗೆ ರಸ್ತೆ ಮಧ್ಯೆ ಕಿರುಚಾಡುತ್ತಾ ಸಾರ್ವಜನಿಕರಿಗೆ ತೊಂದರೆ ಕೊಟ್ಟ ಆರೋದಪ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ.

ಐದಕ್ಕಿಂತ ಹೆಚ್ಚು ಜನರ ತಂಡವನ್ನು ಕಟ್ಟಿಕೊಂಡು ಹೆಡ್ ಬುಷ್ ಚಿತ್ರದ ಬಗ್ಗೆ ಕೂಗಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ವಿಧಾನಸೌಧದ ಮೆಟ್ರೋ ಸ್ಟೇಷನ್ ಮುಂದೆ ವಾಹನಗಳು ಓಡಾಡಿದ್ದು, ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. (ದಿಗ್ವಿಜಯ ನ್ಯೂಸ್​)