ಬೆಂಗಳೂರು: ಸ್ಯಾಂಡಲ್ವುಡ್ ನಟರಾದ ಪ್ರಜ್ವಲ್ ದೇವರಾಜ್ ಮತ್ತು ನಟಿ ಮೇಘನಾ ರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿದ 'ತತ್ಸಮ ತದ್ಭವ' ಸಿನಿಮಾ ಇತ್ತೀಚೆಗಷ್ಟೇ ಬಹುತೇಕ ಚಿತ್ರಮಂದಿರಗಳಲ್ಲಿ ತೆರೆಕಂಡಿತ್ತು. ಇದೀಗ ಈ ಚಿತ್ರವನ್ನು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಹಾಗೂ ಪೊಲೀಸ್ ಅಧಿಕಾರಿಗಳು ಚಿತ್ರಮಂದಿರದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪ್ರದರ್ಶನವನ್ನು ವೀಕ್ಷಿಸಿದ್ದಾರೆ.
ವಿಶಾಲ್ ಆತ್ರೇಯ ನಿರ್ದೇಶನದ ಚೊಚ್ಚಲ ಸಿನಿಮಾ 'ತತ್ಸಮ ತದ್ಭವ' ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಗೊಂಡು ಸಿನಿಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿತು. ಸದ್ಯ ಈ ಚಿತ್ರವನ್ನು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಜತೆ ಐವರು ಡಿಸಿಪಿ ಸೇರಿದಂತೆ 250ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವೀಕ್ಷಣೆ ಮಾಡಿದ್ದಾರೆ.
ಚಿತ್ರದಲ್ಲಿ ಮೇಘನಾ ರಾಜ್, ಪ್ರಜ್ವಲ್ ದೇವರಾಜ್, ಹಿರಿಯ ನಟಿ ಶೃತಿ ಕೃಷ್ಣ, ಬಾಲಾಜಿ ಮನೋಹರ್, ಗಿರಿಜಾ ಲೋಕೇಶ್ ಮತ್ತು ಮಹತಿ ವೈಷ್ಣವಿ ಭಟ್ ಮುಂತಾದವರ ತಾರಗಣವಿದೆ.