ಬೆಂಗಳೂರು: 'ಕಾರ್ಮೋಡ ಸರಿದು' ಎಂಬ ಚಿತ್ರ ನಿರ್ದೇಶಿಸಿದ್ದ ಉದಯ್ ಕುಮಾರ್, ಈಗ ಸದ್ದಿಲ್ಲದೆ ಇನ್ನೊಂದು ಚಿತ್ರ ಮುಗಿಸಿದ್ದಾರೆ. ಅದೇ 'ಬನ್ ಟೀ'. ಈಗಾಗಲೇ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದ್ದು, ಇತ್ತೀಚೆಗೆ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಟ್ರೇಲರ್ ಬಿಡುಗಡೆ ಮಾಡಿದ್ದಾರೆ,
ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ, 'ಉದಯ್ ಹೇಳಿದ ಕಥೆ ಇಷ್ಟವಾಯ್ತು. ಹಂಚಿ ತಿನ್ನುವ ಅಗತ್ಯವಿರುವ ಈ ದಿನಗಳಲ್ಲಿ ಹಂಚಿ ಉಣ್ಣದೇ ಬರೀ ಬಾಚಿಕೊಳ್ಳುವ ಮನಸ್ಥಿತಿ ಹೆಚ್ಚಾಗುತ್ತಿದೆ. ಅದರಿಂದ ಉಂಟಾಗುವ ಸಾಮಾಜಿಕ ತೊಂದರೆಗಳ ಸುತ್ತ ಕಥೆ ಸಾಗುತ್ತದೆ. ಉದಯ್ ನಿರ್ಮಾಪಕರು ಸಿಕ್ತಾರೆ ಅಂತಾ ಫ್ಯಾಷನ್ ಗೋಸ್ಕರ್ ಸಿನಿಮಾ ಮಾಡಿಲ್ಲ. ಆಳವಾಗಿ ತಾಂತ್ರಿಕವಾಗಿ ಚಿತ್ರ ಮಾಡಿದ್ದಾರೆ' ಎಂದರು.
'ಬನ್ ಟೀ' ಚಿತ್ರದಲ್ಲಿ ಮೌರ್ಯ, ತನ್ಮಯ್, ಉಮೇಶ್ ಸಕ್ಕರೆನಾಡು, ಶ್ರೀದೇವಿ, ನಿಶಾ, ಗುಂಡಣ್ಣ, ಸುನಿಲ್ ನಟಿಸಿರುವ ಈ ಚಿತ್ರವನ್ನು ರಾಧಾಕೃಷ್ಣ ಬ್ಯಾನರ್ನಡಿ ಆರ್. ಕೇಶವ ನಿರ್ಮಾಣ ಮಾಡಿದ್ದು, ರಾಜರಾವ್ ಅಂಚಲ್ಕರ್ ಕ್ಯಾಮೆರಾ, ಪ್ರದ್ಯೋತನ್ ಸಂಗೀತ ಚಿತ್ರಕ್ಕಿದೆ.