ನಟ ವಿಜಯ್ ವಿರುದ್ಧ ಮಗ ಜೇಸನ್ ಸಂಜಯ್ ಅನುಸರಿಸಿದ ನಡೆ ಕಂಡು ಅಭಿಮಾನಿಗಳು ಶಾಕ್! Actor Vijay
- ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಹಾಗೂ ಕಾಲಿವುಡ್ ನಟ ವಿಜಯ್ ದಾಂಪತ್ಯದಲ್ಲಿ ಬಿರುಕು ಮೂಡಿದೆ
- ವಿಜಯ್ ಪತ್ನಿ ಸಂಗೀತಾ ಅವರು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ
- ಡಿವೋರ್ಸ್ ವಿಚಾರದಲ್ಲಿ ತಮ್ಮ ತಾಯಿಯ ಪರವಾಗಿ ನಿಂತ ವಿಜಯ್ ಪುತ್ರ ಜೇಸನ್ ಸಂಜಯ್
Actor Vijay : ತಮಿಳಿಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ಹಾಗೂ ಕಾಲಿವುಡ್ ಸೂಪರ್ ಸ್ಟಾರ್ ವಿಜಯ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ಸಂಗೀತಾ ಅವರು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಈ ಸುದ್ದಿ ತಮಿಳುನಾಡು ರಾಜಕೀಯ ಹಾಗೂ ಸಿನಿ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಏಪ್ರಿಲ್ 20ರಂದು ಡಿವೋರ್ಸ್ ಸಂಬಂಧ ವಿಚಾರಣೆ ನಡೆಯಲಿದೆ. ಇದರ ನಡುವೆ ವಿಜಯ್ ಪುತ್ರ ಜೇಸನ್ ಸಂಜಯ್ ಅವರ ನಡೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಡಿವೋರ್ಸ್ ವಿಚಾರದಲ್ಲಿ ಜೇಸನ್ ಸಂಜಯ್ ಅವರು ತಮ್ಮ ತಾಯಿಯ ಪರವಾಗಿ ನಿಂತಿದ್ದಾರೆ ಎಂಬ ಸುದ್ದಿಯಿಂದ. ತಮ್ಮ ತಂದೆಯ ನಡೆಯ ಬಗ್ಗೆ ಅಸಮಧಾನಗೊಂಡಿರುವ ಸಂಜಯ್, ಇನ್ಸ್ಟಾಗ್ರಾಂನಿಂದ ಅವರನ್ನು ಅನ್ಫಾಲೋ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಸ್ಕ್ರೀನ್ಶಾಟ್ಗಳನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.
ಜೇಸನ್ ಸಂಜಯ್, ನಿರ್ದೇಶಕರಾಗಿ ಈಗಷ್ಟೇ ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ತಮ್ಮ ಇನ್ಸ್ಟಾಗ್ರಾಂನಲ್ಲಿ 4 ಲಕ್ಕಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಸಂಜಯ್, ಕೇವಲ 36 ಮಂದಿಯನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ. ಅವರಲ್ಲಿ ನಟರಾದ ವಿಜಯ್ ಸೇತುಪತಿ ಹಾಗೂ ಸಂದೀಪ್ ಕೃಷ್ಣನ್ ಕೂಡ ಒಬ್ಬರು. ಆದರೆ, ತಮ್ಮ ತಂದೆಯನ್ನು ಫಾಲೋ ಮಾಡುತ್ತಿಲ್ಲ. ಹೀಗಾಗಿ ನಾನಾ ಊಹಾಪೋಹಗಳು ಹರಿದಾಡುತ್ತಿವೆ.
ಡಿವೋರ್ಸ್ ಅರ್ಜಿಯಲ್ಲಿ ಏನಿದೆ?
ವಿಜಯ್ ಪತ್ನಿ ಸಂಗೀತಾ ಸೋರ್ನಲಿಂಗಂ ಅವರು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ ಡಿವೋರ್ಸ್ ಪಡೆಯಲು ಕಾರಣ ಏನು ಅನ್ನೋದನ್ನು ತಿಳಿಸಿದ್ದಾರೆ. ವಿಜಯ್, ಆಕೆ (ಹೆಸರು ಉಲ್ಲೇಖಿಸಿಲ್ಲ) ಜೊತೆ ಅನೈತಿಕ ಸಂಬಂಧ ಹೊಂದಿರುವ ವಿಷಯ ನನಗೆ ಹಾಗೂ ನನ್ನ ಮಕ್ಕಳಿಗೆ ತೀರ ಘಾಸಿ ಮಾಡಿದೆ. ಇದು ಮಕ್ಕಳ ಮನಸ್ಸಿನ ಮೇಲೆ ತೀವ್ರ ಪರಿಣಾಮ ಬೀರಿದೆ. ಅದರಲ್ಲೂ, ಅವರಿಬ್ಬರು ಫಾರಿನ್ ಟ್ರಿಪ್ಗಳಿಗೆ ಹೋದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿರುವುದು ತುಂಬ ನೋವುಂಟು ಮಾಡಿದೆ ಎಂದು ಉಲ್ಲೇಖಿಸಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ನಟ ವಿಜಯ್ ಅವರು ಚುನಾವಣಾ ಕೆಲಸದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದರ ನಡುವೆ ಪತ್ನಿ ಸಂಗೀತಾ ಡಿವೋರ್ಟ್ ಅರ್ಜಿ ಸಲ್ಲಿಸಿದ್ದಾರೆ. ಫೆಬ್ರವರಿ 24 ರಂದು ಸಲ್ಲಿಸಲಾದ ಡಿವೋರ್ಸ್ ಅರ್ಜಿಯು ಏಪ್ರಿಲ್ 20 ರಂದು ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಈ ಪ್ರಕರಣದ ವಿಚಾರಣೆಗೆ ವಿಜಯ್ ಖುದ್ದಾಗಿ ಹಾಜರಾಗಬೇಕೆಂದು ಚೆಂಗಲ್ಪಟ್ಟು ನ್ಯಾಯಾಲಯ ಆದೇಶಿಸಿದೆ, (ಏಜೆನ್ಸೀಸ್).