ಬೆಂಗಳೂರು: 2 ಗಂಟೆಗಳ ಹಿಂದೆ ಆಕ್ಷನ್ ಪ್ರಿನ್ಸ್ ನಟ ಧ್ರುವ ಸರ್ಜಾ ಅವರು ತಾವು ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿರುವ 35 ಸೆಕೆಂಡ್ಗಳ ಒಂದು ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ನಟ ವಿಡಿಯೋ ಹಂಚಿಕೊಂಡ 2 ಗಂಟೆಯೊಳಗೆ ಬರೋಬ್ಬರಿ 5,79,000 ಕ್ಕೂ ಹೆಚ್ಚು ವೀವ್ಸ್ ಬಂದಿವೆ. ಈ ವಿಡಿಯೋದಲ್ಲಿ ನಟ ಧ್ರುವ ಸರ್ಜಾ ಅವರು ಹಲವು ವ್ಯಾಯಾಮಗಳನ್ನು ಮಾಡುತ್ತಿರುವುದು ಕಂಡುಬಂದಿದೆ.
ಅಂದಹಾಗೆ, 'ಮಾರ್ಟಿನ್' ಎಂಬ ಕನ್ನಡ ಸಿನಿಮಾದಲ್ಲಿ ನಟಿಸಲಿರುವ ನಟ ಧ್ರುವ ಸರ್ಜಾ ಅವರು ಹಲವು ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಇದೆ. ಹಾಗಾಗಿ, ಅವರು ತಮ್ಮ ದೇಹವನ್ನು ಜಿಮ್ನಲ್ಲಿ ಸಿಕ್ಕಾಪಟ್ಟೆ ಹುರಿಗೊಳಿಸುತ್ತಿದ್ದಾರೆ. ಇನ್ನು, ಇತ್ತೀಚೆಗೆ ಕಾಶ್ಮೀರ್ನಲ್ಲಿ ಶೂಟಿಂಗ್ ಮುಗಿಸಿಕೊಂಡಿರುವ ಈ ಚಿತ್ರತಂಡ, ಎರಡನೇ ಹಂತದ ಶೂಟಿಂಗ್ ಮಾಡಲು ತಯಾರಿ ಮಾಡುತ್ತಿದ್ದಾರೆ.