ಬೆಂಗಳೂರು: ಕಿಡಿಗೇಡಿಗಳು ಫೇಸ್ಬುಕ್ನಲ್ಲಿ ನಟ ವಿನೋದ್ರಾಜ್ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅಶ್ಲೀಲ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ವಿನೋದ್ರಾಜ್ ದೂರು ನೀಡಿದ್ದು, ಉತ್ತರ ವಿಭಾಗದ ಸೈಬರ್ಕ್ರೖೆಂ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣದ ದಾಖಲಿಸಿದ್ದಾರೆ.
ಅಪರಿಚಿತರು ಉದ್ದೇಶಪೂರ್ವಕವಾಗಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದಿದ್ದಾರೆ. ಅದರಲ್ಲಿ ಪ್ರತಿದಿನ ಅಸಭ್ಯ ಬರಹಗಳಿರುವ ಅಶ್ಲೀಲ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ವಿನೋದ್ರಾಜ್ ದೂರಿನಲ್ಲಿ ಮನವಿ ಮಾಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.