ಬೆಂಗಳೂರು: ನಿಶ್ಚಲ್ ಫಿಲಂಸ್ ಸಂಸ್ಥೆಯಡಿ ಮೂಡಿಬರುತ್ತಿರುವ 'ಫಾರ್ REGN' (For Registration) ಚಿತ್ರದ ಹಾಡಿನ ಚಿತ್ರೀಕರಣ ಮಂಗಳೂರು, ಉಡುಪಿ ಬಳಿಯ ಕಡಲ ದಡದಲ್ಲಿ ನಡೆದಿದ್ದು,ಈ ಹಾಡಿನಲ್ಲಿ ಸ್ಯಾಂಡಲ್ವುಡ್ ನಲ್ಲಿ ನಿಧಿಮಾ ಎಂದೇ ಖ್ಯಾತರಾಗಿರುವ ಮಿಲನಾ ನಾಗರಾಜ್ ಹಾಗೂ 'ದಿಯಾ' ಖ್ಯಾತಿಯ ಪೃಥ್ವಿ ಅಂಬರ್ ಕಾಣಿಸಿಕೊಂಡಿದ್ದಾರೆ.
ಈ ಹಾಡಿನ ಮೂಲಕ 'ಫಾರ್ ರಿಜಿಸ್ಟ್ರೇಶನ್' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ದ್ವಿತೀಯ ಹಂತದ ಚಿತ್ರೀಕರಣ ಮಾರ್ಚ್ ಅಂತ್ಯದ ವೇಳೆಗೆ ಆರಂಭವಾಗಲಿದೆ.
'ಫಾರ್ ರಿಜಿಸ್ಟ್ರೇಶನ್' ಚಿತರವು ಒಂದು ರೊಮ್ಯಾಂಟಿಕ್ ಕಾಮಿಡಿಯಾಗಿದ್ದು, ಬೆಂಗಳೂರಿನಲ್ಲಿ ಪ್ರಾರಂಭವಾಗಿತ್ತು. ಪೃಥ್ವಿ ಮತ್ತು ಮಿಲನಾ ಜತೆಗೆ ಸುಧಾರಾಣಿ, ಸುಂದರರಾಜ್, ಸಿಹಿಕಹಿ ಚಂದ್ರು, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ತಬಲಾ ನಾಣಿ, ತ್ರಿವೇಣಿ ರಾವ್, ತುಳು ನಟ ಅರವಿಂದ್ ಬೋಳಾರ್ ಹೀಗೆ ಹಲವು ಪ್ರತಿಭಾವಂತ ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಈ ಚಿತ್ರವನ್ನು ನವೀನ್ ದ್ವಾರಕನಾಥ ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ನವೀನ್ ರಾವ್ ನಿರ್ಮಾಣ ಮಾಡುತ್ತಿದ್ದಾರೆ. ವಿವೇಕ್ ಎಸ್ ಕೆ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ನಾಗಾರ್ಜುನ ಶರ್ಮ ಅವರು ಬರೆದಿರುವ ಹಾಡುಗಳಿಗೆ ಹರೀಶ್ ಆರ್ ಕೆ ಸಂಗೀತ ನೀಡಿದ್ದಾರೆ.