ಬೆಂಗಳೂರು: ಸ್ಯಾಂಡಲ್ವುಡ್ ನಟ ದಿ. ಚಿರಂಜೀವಿ ಸರ್ಜಾ ಅವರ ಸಮಾಧಿ ನಿರ್ವಣಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಲಾಯಿತು. ಕನಕಪುರ ರಸ್ತೆಯಲ್ಲಿರುವ ಧ್ರುವ ಸರ್ಜಾ ಒಡೆತನದ ಬೃಂದಾವನ ಫಾರ್ಮ್ ಹೌಸ್ನಲ್ಲಿ ಚಿರಂಜೀವಿ ಸರ್ಜಾ ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಇದೀಗ ಅದೇ ಜಾಗದಲ್ಲಿ ಸಮಾಧಿ ನಿರ್ವಣಕ್ಕೆ ಇಡೀ ಕುಟುಂಬಸ್ಥರು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಶನಿವಾರ ಬೆಳಗ್ಗೆ ಧ್ರುವ ಸರ್ಜಾ, ಪತ್ನಿ ಪ್ರೇರಣಾ, ಧ್ರುವ ತಂದೆ- ತಾಯಿ ಮತ್ತು ಅಜ್ಜಿ ಲಕ್ಷ್ಮೀದೇವಿ ಸೇರಿ ಕೆಲ ಆಪ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಜೂ. 7ರಂದು ಹೃದಯಾಘಾತದಿಂದ ಚಿರು ಸಾವನ್ನಪ್ಪಿದ್ದರು.