ಸಿನಿವಾಣಿ

ಮುಂಗಡ ಬುಕ್ಕಿಂಗ್​ನಲ್ಲಿ 'ಜವಾನ್' ಸದ್ದು; ಮೊದಲ ದಿನವೇ 50-70 ಕೋಟಿ ರೂ. ಗಳಿಕೆಯ ನಿರೀಕ್ಷೆ! ​

ಮೋಹನ್​ ಶೆಟ್ಟಿ

ಮುಂಬೈ: ಅಟ್ಲಿ ಕುಮಾರ್​ ನಿರ್ದೇಶನದಲ್ಲಿ ತಯಾರಾಗಿರುವ 'ಜವಾನ್'​ ಚಿತ್ರವು ಸೆಪ್ಟಂಬರ್​ 07 ರಂದು ದೇಶಾದ್ಯಂತ ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲು ಸಜ್ಜಾಗಿದ್ದು, ಮೊದಲ ದಿನವೇ ಬಾಕ್ಸ್​ ಆಫೀಸ್​ನಲ್ಲಿ 60-70 ಕೋಟಿ ರೂ. ಗಳಿಕೆ ಕಾಣಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಾಲಿವುಡ್​ ಕಿಂಗ್​ ಖಾನ್​​, ನಟ ಶಾರೂಖ್​ ಖಾನ್​ ಅಭಿನಯದ ಬಹುನಿರೀಕ್ಷಿತ ಜವಾನ್ ಚಿತ್ರದ ಬಿಡುಗಡೆಗೆ ಇದೀಗ ಕ್ಷಣಗಣನೆ ಆರಂಭಗೊಂಡಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಚಿತ್ರವನ್ನು ಅದ್ದೂರಿಯಾಗಿ ಸ್ವೀಕರಿಸಲು ಚಿತ್ರಮಂದಿರಗಳ ಮುಂದೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.


'ಜವಾನ್' ಚಿತ್ರದ ಮುಂಗಡ ಬುಕಿಂಗ್ ಈಗಾಗಲೇ ಆರಂಭಗೊಂಡಿದ್ದು, ಸಿನಿಮಾ ವೀಕ್ಷಿಸಲು ತುದಿಗಾಲಿನಲ್ಲಿ ನಿಂತಿರುವ ಸಿನಿಪ್ರೇಕ್ಷಕರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್​ ಖರೀದಿಸಿದ್ದಾರೆ ಎಂದು ಇತ್ತೀಚಿನ ವರದಿ ತಿಳಿಸಿದೆ. ಚಿತ್ರವು ಬಿಡುಗಡೆಗೊಂಡ ಮೊದಲ ದಿನವೇ ಬಾಕ್ಸ್ ಆಫೀಸ್​ನಲ್ಲಿ 60-70 ಕೋಟಿ ರೂ. ಗಳಿಕೆ ಮಾಡಲಿದೆ ಎಂಬ ನಿರೀಕ್ಷೆಗಳು ಇದೀಗ ವ್ಯಕ್ತವಾಗಿದೆ.

ಚಿತ್ರದಲ್ಲಿ ಶಾರೂಖ್ ಖಾನ್​ ಮತ್ತು ನಯನತಾರ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ವಿಜಯ್​ ಸೇತುಪತಿ, ಸಾನ್ಯ ಮಲ್ಹೋತ್ರಾ, ಪ್ರಿಯಾಮಣಿ, ಯೋಗಿ ಬಾಬು, ಸುನೀಲ್​ ಗ್ರೋವರ್​ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ,(ಏಜೆನ್ಸೀಸ್).