ಸಿನಿವಾಣಿ

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ವಿಧಿವಶರಾಗಿದ್ದಾರೆ.

ಅವರಿಗೆ 69 ವರ್ಷ ವಯಸ್ಸು ಆಗಿತ್ತು. ಕಿಡ್ನಿ, ಆಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಕೆಂಗೇರಿಯ ಬಿಡಿಎ ಅಪಾರ್ಟ್ಮೆಂಟ್​​ನಲ್ಲಿ ಅವರು ನಿಧನರಾದರು. ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಅವರು ಈವರೆಗೆ ಒಟ್ಟು 650 ಸಿನಿಮಾಗಳಲ್ಲಿ ನಟಿಸಿದ್ದರು.