ಬೆಂಗಳೂರು: ಇತ್ತೀಚೆಗೆ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳು ಕನ್ನಡದಲ್ಲಿ ಸಾಕಷ್ಟು ಬರುತ್ತಿವೆ. ಅದರಲ್ಲಿ "ದಾರಿ ಯಾವುದಯ್ಯ ವೈಕುಂಠಕೆ" ಚಿತ್ರವು ಒಂದು. ಇದೀಗ ಇದೇ ಚಿತ್ರತಂಡದಿಂದ ಸಂತಸದ ಸುದ್ದಿಯೊಂದು ಹೊರಬಂದಿದೆ. ಸಿದ್ದು ಪೂರ್ಣಚಂದ್ರ ನಿರ್ದೇಶನದ ‘ದಾರಿ ಯಾವುದಯ್ಯ ವೈಕುಂಠಕೆ‘ ಚಿತ್ರ ಬರೋಬ್ಬರಿ 6 ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾಗಿದೆ.
ರಾಜಸ್ಥಾನ ಅಂತಾರಾಷ್ಟ್ರೀಯ ಚಿತ್ರೋತ್ಸವ, ಕಲರ್ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್, 5th ಇಂಡಿಯನ್ ವರ್ಲ್ಡ್ ಫಿಲ್ಮ್ ಫೆಸ್ಟಿವಲ್, ಇಂಡಿಯನ್ ಇಂಟರ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಸೇರಿ 6 ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಈ ಚಿತ್ರ ಆಯ್ಕೆಯಾಗಿದ್ದು, ಶೀಘ್ರದಲ್ಲಿ ಪ್ರದರ್ಶನವಾಗಲಿದೆ. ಇನ್ನೇನು ಶೀಘ್ರದಲ್ಲಿ ಚಿತ್ರಮಂದಿರಗಳಲ್ಲಿಯೂ ಬಿಡುಗಡೆ ಆಗಲಿದೆ.
ಇದನ್ನೂ ಓದಿ: ದೊಡ್ಡದಾಗಿ ಬೆಳೆದಿದ್ದು ಕಟ್ ಮಾಡುವುದು ಅನಿವಾರ್ಯ… ಅಮಿತಾಭ್ ಟ್ವೀಟರ್ನಲ್ಲಿ ನಿಗೂಢ ಚಿಹ್ನೆ ‘!!!!! ?????’
ವರ್ಧನ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಅನುಷ, 'ತಿಥಿ' ಖ್ಯಾತಿಯ ಪೂಜಾ, ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅರುಣ್ ಮೂರ್ತಿ, ಸೆರಿ ಹಲವರಿದ್ದಾರೆ. ಮುಂತಾದವರಿದ್ದಾರೆ. ಲೋಕಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಿತಿನ್ ಛಾಯಾಗ್ರಹಣ ಹಾಗೂ ಮುತ್ತುರಾಜ್ ಸಂಕಲನವಿದೆ.