ಸಿನಿವಾಣಿ

ಹಿಂದು ಬಳಿಕ ಕ್ರಿಶ್ಚಿಯನ್​ ಸಂಪ್ರದಾಯದಂತೆ ಕೀರ್ತಿ ಸುರೇಶ್​ ಮದುವೆ! ಲಿಪ್​ಲಾಕ್​ ಫೋಟೋ ವೈರಲ್​ | Keerthy Suresh

Keerthy Suresh : ಹದಿನೈದು ವರ್ಷಗಳ ಡೇಟಿಂಗ್ ನಂತರ, ನಟಿ ಕೀರ್ತಿ ಸುರೇಶ್ ಮತ್ತು ಆಂಟೋನಿ ಥಟ್ಟಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಿ.12ರಂದು ಹಿಂದು ಸಂಪ್ರದಾಯದಂತೆ ಮದುವೆಯಾಗಿದರು. ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ನಡೆದ ಅದ್ಧೂರಿ ವಿವಾಹ ಸಮಾರಂಭದಲ್ಲಿ ಆಪ್ತರು ಮತ್ತು ಸ್ನೇಹಿತರು ಮಾತ್ರ ಭಾಗವಹಿಸಿದ್ದರು.

ಇದೀಗ ಕ್ರಿಶ್ಚಿಯನ್​ ಪದ್ಧತಿಯಂತೆ ಕೀರ್ತಿ ಮತ್ತು ಆಂಟೋನಿ ವಿವಾಹ ಮಾಡಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಕೀರ್ತಿ, ತಮ್ಮ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗುತ್ತಿವೆ. ಅದರಲ್ಲೂ ಕೀರ್ತಿ​ ಅವರು ಆಂಟೋನಿ​ಗೆ ಲಿಪ್​ಲಾಕ್​ ಮಾಡುತ್ತಿರುವ ಫೋಟೋ ಎಲ್ಲರ ಗಮನ ಸೆಳೆದಿದೆ.

ಇಬ್ಬರು ಉಂಗುರ ಬದಲಾಯಿಸಿಕೊಳ್ಳುವ ಹಾಗೂ ನೃತ್ಯ ಮಾಡುವ ದೃಶ್ಯಗಳು ವಿಶೇಷವಾಗಿ ಆಕರ್ಷಕವಾಗಿವೆ. ಇವುಗಳನ್ನು ನೋಡಿದ ನೆಟ್ಟಿಗರು ಹಾಗೂ ಅಭಿಮಾನಿಗಳು ಮತ್ತೊಮ್ಮೆ ನವ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಚಿತ್ರರಂಗದ ಗಣ್ಯರು ಕೂಡ ಅಭಿನಂದನೆ ಸಲ್ಲಿಸಿದ್ದಾರೆ. ಇದರ ನಡುವೆ ಸಂಭ್ರಮಾಚರಣೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೂ ಗ್ರಾಸವಾಗಿವೆ. ಅನೇಕರು ಲಿಪ್​ಲಾಕ್​ ಫೋಟೋವನ್ನು ಟ್ರೋಲ್​ ಸಹ ಮಾಡುತ್ತಿದ್ದಾರೆ.

ಅಂದಹಾಗೆ ಕೀರ್ತಿ ಮತ್ತು ಆಂಟೋನಿ ಒಂದೇ ಶಾಲೆಯಲ್ಲಿ ಒಟ್ಟಿಗೆ ಓದುತ್ತಿದ್ದರು. ಹೈಸ್ಕೂಲ್ ದಿನಗಳಲ್ಲೇ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಆಂಟೋನಿ ಕೀರ್ತಿಗಿಂತ ಎರಡು ವರ್ಷ ದೊಡ್ಡವರು. ಕೀರ್ತಿಗೆ ಸದ್ಯ 32 ವರ್ಷ ಮತ್ತು ಆಂಟೋನಿಗೆ 34 ವರ್ಷ. ಕೊಚ್ಚಿ ಮೂಲದ ಆಂಟೋನಿ ದೋಹಾದಲ್ಲಿ ಉದ್ಯಮಿಯಾಗಿದ್ದಾರೆ. ಆಂಟೋನಿ ಕೊಚ್ಚಿ ಮೂಲದ ಆಸ್ಪರೋಸ್ ವಿಂಡೋಸ್ ಸಲ್ಯೂಷನ್ಸ್ ಎಂಬ ಕಂಪನಿಯ ಮಾಲೀಕರಾಗಿದ್ದಾರೆ.

ಅಂದಹಾಗೆ ಕೀರ್ತಿ ಸುರೇಶ್ ಮಲಯಾಳಂ ನಿರ್ಮಾಪಕ ಸುರೇಶ್ ಮತ್ತು ನಟಿ ಮೇನಕಾ ಅವರ ಪುತ್ರಿ. ಬಾಲನಟಿಯಾಗಿ ಚಿತ್ರರಂಗ ಪ್ರವೇಶ ಮಾಡಿದ ಕೀರ್ತಿ ಮಲಯಾಳಂ ಚಿತ್ರ ಗೀತಾಂಜಲಿ ಮೂಲಕ ನಟಿಯಾಗಿ ಬಡ್ತಿ ಪಡೆದರು. ಸದ್ಯ ತಮಿಳು ಚಿತ್ರರಂಗದ ಸ್ಟಾರ್​ ನಟಿಯರಲ್ಲಿ ಒಬ್ಬರಾಗಿದ್ದಾರೆ. ತೆಲುಗಿನಲ್ಲೂ ನಟಿಸಿದ್ದಾರೆ. ನಟ ವಿಜಯ್​, ಸೂರ್ಯ, ವಿಕ್ರಮ್​, ಶಿವಕಾರ್ತಿಕೇಯನ್​,​ ನಾನಿ, ಮಹೇಶ್​ ಬಾಬು ಸೇರಿದಂತೆ ಸ್ಟಾರ್​ ನಟರ ಜತೆ ತೆರೆ ಹಂಚಿಕೊಂಡಿದ್ದಾರೆ. ಕನ್ನಡದಲ್ಲಿ ಒಂದೇ ಒಂದು ಸಿನಿಮಾದಲ್ಲಿ ನಟಿಸದಿದ್ದರೂ ಪ್ಯಾನ್​ ಇಂಡಿಯಾ ಪರಿಕಲ್ಪನೆ ಬಳಿಕ ಕೀರ್ತಿ ಸುರೇಶ್​ ನಟನೆಯ ಡಬ್ಬಿಂಗ್​ ಚಿತ್ರಗಳೂ ಕನ್ನಡದಲ್ಲೂ ಸದ್ದು ಮಾಡಿದ್ದು, ಆಕೆಯ ನಟನೆ ಮತ್ತು ಸೌಂದರ್ಯಕ್ಕೆ ಕನ್ನಡ ಪ್ರೇಕ್ಷಕರು ಸಹ ಫಿದಾ ಆಗಿದ್ದಾರೆ. ಪ್ರಸ್ತುತ ರಿವಾಲ್ವರ್ ರೀಟಾ ಮತ್ತು ಬೇಬಿ ಜಾನ್ ಚಿತ್ರಗಳಲ್ಲಿ ನಟಿಸಿದ್ದಾರೆ. (ಏಜೆನ್ಸೀಸ್​)