ಬೆಂಗಳೂರು: ಕವೀಶ್ ಶೆಟ್ಟಿ ಮತ್ತು ‘ಜೊತೆ ಜೊತೆಯಲಿ’ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ನಟಿಸುತ್ತಿರುವ ಚಿತ್ರಕ್ಕೆ ಮರಾಠಿ ಬೆಡಗಿ ಎಂಟ್ರಿಕೊಟ್ಟಿದ್ದಾರೆ. ಮರಾಠಿ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ಶಿವಾನಿ ಸುರ್ವೆ, ಮೊದಲ ಬಾರಿ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡುತ್ತಿದ್ದಾರೆ.
ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರಕ್ಕೆ ಸಡಗರ ರಾಘವೇಂದ್ರ ನಿರ್ದೇಶನ ಮಾಡುತ್ತಿದ್ದು, ಇತ್ತೀಚೆಗಷ್ಟೇ ಚಿತ್ರದ ಸರಳ ಮುಹೂರ್ತ ನೆರವೇರಿದೆ. ವಿಜಯ್ ಕುಮಾರ್ ಶೆಟ್ಟಿ ಮತ್ತು ರಮೇಶ್ ಕೊಠಾರಿ ನಿರ್ಮಾಣ ಮಾಡುತ್ತಿರುವ ಈ ಚಿತ್ರ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ, ಮರಾಠಿ ಮತ್ತು ಹಿಂದಿ ಯಲ್ಲಿಯೂ ಸಿದ್ಧವಾಗಲಿದೆ. ಶಿವಾನಿ ಜತೆಗೆ ಮರಾಠಿ ನಟ ವಿರಾಟ್ ಮಡ್ಕೆ ಸಹ ಈ ಪ್ಯಾನ್ ಇಂಡಿಯಾ ಚಿತ್ರದ ಭಾಗವಾಗಿದ್ದಾರೆ.