ಬೆಂಗಳೂರು: ಧನಂಜಯ ವಿಭಿನ್ನ ಲುಕ್ನಲ್ಲಿ ಕಾಣಿಸಿಕೊಂಡಿರುವ 'Once Upon A Time In ಜಮಾಲಿಗುಡ್ಡ' ಡಿ. 30ಕ್ಕೆ ಬಿಡುಗಡೆಯಾಗುತ್ತಿದೆ. ಬಿಡುಗಡೆಗೆ 15 ದಿನ ಇದ್ದರೂ ಟ್ರೇಲರ್ ಇಲ್ಲ, ಹಾಡಿಲ್ಲ ಎನ್ನುತ್ತಿದ್ದವರಿಗೆ ಚಿತ್ರತಂಡದವರು ಕೊನೆಗೂ ಉತ್ತರ ಕೊಟ್ಟಿದ್ದಾರೆ. ಇತ್ತೀಚೆಗೆ ಒಂದು ಸಮಾರಂಭದಲ್ಲಿ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದಾರೆ.
ಇದೊಂದು ಫೀಲ್ ಗುಡ್ ಸಿನಿಮಾ ಎನ್ನುವ ಧನಂಜಯ್, 'ಕುಶಾಲ್ ಗೌಡ ಅವರು ಈ ಚಿತ್ರಕ್ಕಾಗಿ ಫೇಸ್ ಬುಕ್ ಮೂಲಕ ನಿರ್ಮಾಪಕರನ್ನು ಹುಡುಕಿದರು. ಆಗ ಶ್ರೀಹರಿ ಸಿಕ್ಕರು. I ಈ ಚಿತ್ರದ ಚಿತ್ರೀಕರಣವಾಗುವ ನಾನು ಬಹಳ ಬಿಜಿ ಇದ್ದೆ. ಹೆಚ್ಚಿನ ಚಿತ್ರೀಕರಣ ಬಾಬಾಬುಡನಗಿರಿಯಲ್ಲೇ ನಡೆಯಬೇಕಿತ್ತು. ಅದರಲ್ಲೂ ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ವಾತಾವರಣದಲ್ಲೇ ಚಿತ್ರೀಕರಣ ನಡೆಯಬೇಕಿಗಿದ್ದರಿಂದ ಬೇಗ ಈ ಚಿತ್ರೀಕರಣದಲ್ಲಿ ಪಾಲ್ಗೊಂಡೆ' ಎನ್ನುತ್ತಾರೆ ಧನಂಜಯ್.
'Once Upon A Time In ಜಮಾಲಿಗುಡ್ಡ' ಚಿತ್ರ ನನ್ನ ವೃತ್ತಿಬದುಕಿನಲ್ಲಿ ಸದಾ ನೆನಪಿನಲ್ಲಿ ಉಳಿಯುವ ಸಿನಿಮಾವಾಗಲಿದೆ ಎಂದೇ ಮಾತು ಪ್ರಾರಂಭಿಸುವ ಅದಿತಿ, 'ಚಿತ್ರದ ಭಾವನಾತ್ಮಕ ಸನ್ನಿವೇಶಗಳಲ್ಲಿ ನಾನು ಎಷ್ಟೋ ಕಡೆ ಸಹಜವಾಗಿ ಅತ್ತಿದ್ದು ಇದೆ. ಅಂತಹ ಅದ್ಭುತ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಧನಂಜಯ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ' ಎಂದರು ನಟಿ ಅದಿತಿ ಪ್ರಭುದೇವ.
'Once Upon A Time In ಜಮಾಲಿಗುಡ್ಡ' ಚಿತ್ರದಲ್ಲಿ ಭಾವನಾ, ಪ್ರಕಾಶ್ ಬೆಳವಾಡಿ, ಯಶ್ ಶೆಟ್ಟಿ, ತ್ರಿವೇಣಿ ರಾವ್, ದಿವ್ಯ, ಬೇಬಿ ಪ್ರಾಣ್ಯ ಮುಂತಾದವರು ನಟಿಸಿದ್ದು, ಚಿತ್ರಕ್ಕೆ ಕಾರ್ತಿಕ್ ಅವರ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಅವರ ಸಂಗೀತವಿದೆ. ಇನ್ನು, ಅನೂಪ್ ಸೀಳಿನ್ ಹಿನ್ನೆಲೆ ಸಂಗೀತ ಸಂಯೋಜಿಸಿದ್ದಾರೆ.