ಬೆಂಗಳೂರು: ಇತ್ತೀಚೆಗಷ್ಟೇ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ ನಟ ಧೃವ ಸರ್ಜಾ ಅಭಿನಯದ 'ಪೊಗರು' ಸಿನಿಮಾಗೆ ವಿವಾದದ ಕಿಡಿ ಹೊತ್ತಿದ್ದು, ಅದನ್ನು ಆರಿಸಲು ಬ್ರಾಹ್ಮಣ ಸಮುದಾಯದ ಬಳಿ ಚಿತ್ರ ನಿರ್ದೇಶಕ ನಂದ ಕಿಶೋರ್ ಕ್ಷಮೆಯಾಚಿಸಿದ್ದಾರೆ. ಅಲ್ಲದೆ, ವಿವಾದಿತ ದೃಶ್ಯಗಳನ್ನು ಕತ್ತರಿಸಲು ಪೊಗರು ಟೀಂ ನಿರ್ಧರಿಸಿದೆ.
ಪೊಗರು ಚಿತ್ರದಲ್ಲಿ ಚಪ್ಪಲಿ ಕಾಲಿನಿಂದ ಜನಿವಾರ ಹಾಕಿರುವ ಬ್ರಾಹ್ಮಣನನ್ನ ಕಾಲಿನಿಂದ ಒದೆಯುವ ದೃಶ್ಯವಿದೆ. ಇಂತಹ ಸೀನ್ಗಳು ಬ್ರಾಹ್ಮಣರ ಭಾವನೆಗೆ ಧಕ್ಕೆ ತಂದಿದ್ದು, ನೋವುಂಟು ಮಾಡಿದೆ ಎಂದು ಚಿತ್ರತಂಡದ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಮಂಗಳವಾರ ಬ್ರಾಹ್ಮಣ ಸಮುದಾಯ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದೆ. ಅಲ್ಲದೆ ಎರಡ್ಮೂರು ದಿನದಿಂದ ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಆಕ್ರೋಶ ಭುಗಿಲೆದ್ದಿತ್ತು. ಇದನ್ನೂ ಓದಿರಿ ಒಂದೂವರೆ ವರ್ಷದ ಮಗು ಕೊಂದಿದ್ದ ಪಾಪಿ ತಂದೆಗೆ ಗಲ್ಲುಶಿಕ್ಷೆ!
ಬ್ರಾಹ್ಮಣ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಫಿಲ್ಮ್ ಚೇಂಬರ್ನಲ್ಲಿ ಪೊಗರು ಚಿತ್ರದ ನಿರ್ದೇಶಕ ನಂದಕಿಶೋರ್ ಹಾಗೂ ನಿರ್ಮಾಪಕ ಬಿ.ಕೆ.ಗಂಗಾಧರ್ ಸುದ್ದಿಗೋಷ್ಠಿ ನಡೆಸಿದರು. ಬ್ರಾಹ್ಮಣ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಸಿನಿಮಾ ತಂಡ ಸುದ್ದಿಗೋಷ್ಠಿ ನಡೆಸಿದ ಪೊಗರು ಚಿತ್ರದ ನಿರ್ದೇಶಕ ನಂದಕಿಶೋರ್ ಹಾಗೂ ನಿರ್ಮಾಪಕ ಬಿ.ಕೆ.ಗಂಗಾಧರ್, ವಿರೋಧ ವ್ಯಕ್ತವಾಗಿರುವ ದೃಶ್ಯ ತೆಗೆಯುವುದಾಗಿ ಹೇಳಿದರು.
ಪೊಗರು ಸಿನಿಮಾ ವಿರುದ್ಧ ಬ್ರಾಹ್ಮಣ ಮಹಾಸಭಾ ಮಂಡಳಿ ವತಿಯಿಂದ ಫಿಲಂ ಚೇಂಬರ್ಗೆ ದೂರು ನೀಡಲಾಗಿತ್ತು. ಈ ಕುರಿತು ಬ್ರಾಹ್ಮಣ ಮಹಾಸಭಾ ಮಂಡಳಿಯ ಸದಸ್ಯರೊಂದಿಗೆ ಫಿಲ್ಮ್ ಚೇಂಬರ್ನಲ್ಲಿ ಅಧ್ಯಕ್ಷ ಜಯರಾಜ್, ಉಪಾಧ್ಯಕ್ಷ ಉಮೇಶ್ ಬಣಕಾರ್, ಗೌರವ ಕಾರ್ಯದರ್ಶಿ ಎನ್.ಎಂ.ಸುರೇಶ್, ನಿರ್ಮಾಪಕ ಸೂರಪ್ಪ ಬಾಬು ಹಾಗೂ ಪೊಗರು ಸಿನಿಮಾದ ನಿರ್ಮಾಪಕ ಬಿ.ಎನ್.ಗಂಗಾಧರ್ ಸಮ್ಮುಖದಲ್ಲಿ ಸಮಸ್ಯೆ ಬಗೆಹರಿಸಿದ್ದಾರೆ.