ಸಿನಿವಾಣಿ

ಬಹುಭಾಷಾ ನಟಿ ರಾಕುಲ್​ ಪ್ರೀತ್​ ಸಿಂಗ್​​ ಅವರ​ ಮುಂಬೈ ನಿವಾಸದಲ್ಲಿ ಅಗ್ನಿ ಅವಘಡ

ಮುಂಬೈ: ಬಹುಭಾಷಾ ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರ ಮುಂಬೈ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

ಅಗ್ನಿ ಅವಘಡ ಮಾಹಿತಿ ತಿಳಿದ ಬೆನ್ನಲ್ಲೇ ಅಗ್ನಿಶಾಮಕ ಸಿಬ್ಬಂದಿ ಮತ್ತು ಆಂಬ್ಯುಲೆನ್ಸ್​ ಘಟನಾ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿದೆ. ರಾಕುಲ್​ ವಾಸವಿರುವ ಕಟ್ಟಡದ 12ನೇ ಮಹಡಿಯಲ್ಲಿ ಈ ಘಟನೆ ನಡೆದಿದೆ. ಆದರೆ, ಇದಕ್ಕೆ ಕಾರಣ ಏನು ಎಂಬುದು ಇನ್ನು ತಿಳಿದುಬಂದಿಲ್ಲ.

ಇನ್ನು ರಾಕುಲ್​ ಅವರ ಸಿನಿಮಾ ವಿಚಾರಕ್ಕೆ ಬರುವುದಾದರೆ, ಯಾರಿಯನ್​ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಟ್ಟ ಬಹುಭಾಷಾ ನಟಿ ರಾಕುಲ್​ ಪ್ರೀತ್​ ಸಿಂಗ್​ ಸದ್ಯ ಬಹು ಬೇಡಿಕೆ ನಟಿಯಾಗಿದ್ದಾರೆ. ತನ್ನ ಸಿನಿ ಜರ್ನಿಯಲ್ಲಿ ವಿವಿಧ ಬಗೆಯ ಚಿತ್ರಗಳನ್ನು ಮಾಡಿರುವ ರಾಕುಲ್​ ಈ ಬಾರಿ ವಿಭಿನ್ನ ಚಿತ್ರವೊಂದಕ್ಕೆ ಸಹಿ ಮಾಡಿದ್ದಾರೆ. ಕಾಂಡೋಮ್​ ಪರೀಕ್ಷಕಳಾಗಿ ಕಾಣಿಸಿಕೊಳ್ಳುತ್ತಿರುವ “ಛತ್ರಿವಾಲಿ” ಸಿನಿಮಾದ ಶೂಟಿಂಗ್​ ನೆಡೆಯುತ್ತಿದೆ. ಇತ್ತೀಚೆಗಷ್ಟೇ ಚಿತ್ರ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆಯಾಗಿದೆ.