ಹೈದರಾಬಾದ್: ನಟಿ ಕಸ್ತೂರಿ ಅವರು 80 ಮತ್ತು 90ರ ದಶಕದಲ್ಲಿ ಬಹು ಬೇಡಿಕೆ ನಟಿಯಾಗಿದ್ದರು. ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸುವ ಮೂಲಕ ಬಹುಭಾಷಾ ನಟಿ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಎಲ್ಲ ಸಿನಿರಂಗದ ಸ್ಟಾರ್ ನಟರ ಜತೆ ಕಸ್ತೂರಿ ಅಭಿನಯಿಸಿದ್ದಾರೆ. ಈಗಲೂ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಕಸ್ತೂರಿ ಅವರು ಸಕ್ರಿಯರಾಗಿದ್ದಾರೆ.
ಕಸ್ತೂರಿ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು. ರಾಜಕೀಯ ಹಾಗೂ ಸಿನಿಮಾಗೆ ಸಂಬಂಧಿಸಿದ ಘಟನೆಗಳ ಬಗ್ಗೆ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವುದರಲ್ಲಿ ಅವರು ಎಂದಿಗೂ ದೂರ ಉಳಿಯುವುದಿಲ್ಲ. ಕೆಲವು ತಿಂಗಳ ಹಿಂದೆ ಅಜಯ್ ದೇವಗನ್ ಮತ್ತು ಕಿಚ್ಚ ಸುದೀಪ್ ನಡುವೆ ಭಾಷಾ ವಿಚಾರವಾಗಿ ನಡೆದ ಚರ್ಚೆಯಲ್ಲಿ ರಾಷ್ಟ್ರೀಯ ಮಾಧ್ಯಮಗಳಲ್ಲಿಯೂ ಕಸ್ತೂರಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮೂಲಕ ಕಿಚ್ಚನ ಪರ ಬ್ಯಾಟ್ ಬೀಸಿದ್ದರು.
ಇನ್ನು ಕಸ್ತೂರಿ ಅವರಿಗೆ ವಯಸ್ಸು 48 ಆದರೂ ಗ್ಲಾಮರ್ ಪ್ರದರ್ಶನ ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಹಾಟ್ ಫೋಟೋಗಳನ್ನು ಹರಿಬಿಡುವ ಮೂಲಕ ಪಡ್ಡೆ ಹುಡುಗರ ಹೃದಯದ ಬಡಿತವನ್ನು ಹೆಚ್ಚಿಸುತ್ತಿರುತ್ತಾರೆ. ಇತ್ತೀಚೆಗೆ ಅವರ ಕುರಿತಾದ ಒಂದು ವರದಿ ಹರಿದಾಡುತ್ತಿದೆ. 60 ವರ್ಷದ ಉದ್ಯಮಿ ಜೊತೆ ಕಸ್ತೂರಿ ಅವರು ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದು, ಅವರ ಜೊತೆ ಖಾಸಗಿ ಪ್ರವಾಸ ಸಹ ಮಾಡಿದ್ದಾ ಎಂದು ಹೇಳಲಾಗಿದೆ. ಈ ವಿಚಾರವಾಗಿ ಸ್ವತಃ ಕಸ್ತೂರಿ ಅವರೇ ಸ್ಪಷ್ಟನೆ ನೀಡಿದ್ದಾರೆ.
ಇಂತಹ ಸುದ್ದಿ ಕೇಳಿ ನಾನು ನಿಜಕ್ಕೂ ಬೇಸರಗೊಂಡಿದ್ದೇನೆ. ಸಿನಿಮಾ ಇಂಡಸ್ಟ್ರಿಯಲ್ಲಿರುವ ನಟಿಯರ ಬಗ್ಗೆ ಇಂತಹ ಸುದ್ದಿಗಳು ಕೇಳಿಬರುವುದು ಸಾಮಾನ್ಯ. ಆದರೆ, ಈ ಸುದ್ದಿಯನ್ನು ಕೇಳಿ ಮನಸ್ಸಿಗೆ ತುಂಬಾ ನೋವಾಯಿತು ಎನ್ನುವ ಮೂಲಕ ಹರಿದಾಡುತ್ತಿರುವ ಅಕ್ರಮ ಸಂಬಂಧದ ಸುದ್ದಿಯನ್ನು ಕಸ್ತೂರಿ ಅವರು ತಳ್ಳಿ ಹಾಕಿದ್ದಾರೆ.
ಸಿನಿಮಾ ವಿಚಾರಕ್ಕೆ ಬರುವುದಾದರೆ, ಕಸ್ತೂರಿ ಅವರು ಪ್ರಸ್ತುತ ವಿಜಯ್ ಆಂಟೋನಿ ಅವರ ‘ತಮಿಲರಸನ್’, ‘ಉನ್ ಕಾದಲ್ ಇರುಂದಾಲ್’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದಲ್ಲಿ ಹಬ್ಬ, ಜಾಣ ಹಾಗೂ ತುತ್ತಾಮುತ್ತಾ ಸಿನಿಮಾಗಳಲ್ಲಿ ನಟಿಸುವ ಮೂಲಕ ಕನ್ನಡಿಗರಿಗೂ ಕಸ್ತೂರಿ ಪರಿಚಿತರಾಗಿದ್ದಾರೆ. (ಏಜೆನ್ಸೀಸ್)