ಸಿನಿವಾಣಿ

ಬೆಂಗಳೂರಿನಲ್ಲಿ RRR ಚಿತ್ರದ ಪ್ರಿ ರಿಲೀಸ್ ಇವೆಂಟ್: ಇವರೆ ನೋಡಿ ಕಾರ್ಯಕ್ರಮದ ಮುಖ್ಯ ಅತಿಥಿಗಳು

ಬೆಂಗಳೂರು​: ಸ್ಟಾರ್​ ಡೈರೆಕ್ಟರ್​ ರಾಜಮೌಳಿ ನಿರ್ದೇಶನದ ಹಾಗೂ ಜೂ. ಎನ್​ಟಿಆರ್​ ಮತ್ತು ರಾಮ್​ಚರಣ್​ ನಟನೆಯ ಬಹುನಿರೀಕ್ಷಿತ “ಆರ್​ಆರ್​ಆರ್”​ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಜನವರಿ 7ರಂದು ಚಿತ್ರ ಬಿಡುಗಡೆಯಾಗಲಿದ್ದು, ಜೂ. ಎನ್​ಟಿಆರ್​ ಹಾಗೂ ರಾಮ್​ಚರಣ್​ ಅಭಿಮಾನಿಗಳು ಬಹಳ ಕಾತರದಿಂದ ಎದುರು ನೋಡುತ್ತಿದ್ದಾರೆ. ಆರ್​ಆರ್​ಆರ್​ ಪ್ಯಾನ್​ ಇಂಡಿಯಾ ಸಿನಿಮಾ ಆಗಿದ್ದು, ಚಿತ್ರತಂಡ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದೆ.

ಈಗಾಗಲೇ ಮುಂಬೈನಲ್ಲಿ ಪ್ರಿ ರಿಲೀಸ್​ ಈವೆಂಟ್​ ನಡೆಸಿರುವ ಆರ್​ಆರ್​ಆರ್​ ಚಿತ್ರತಂಡ ಇದೀಗ ಬೆಂಗಳೂರಿನಲ್ಲಿ ಈವೆಂಟ್​ ನಡೆಸಲು ಮುಂದಾಗಿದೆ. ಇದೇ ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಈವೆಂಟ್​ ನಡೆಯಲಿದ್ದು, ಶಿವಣ್ಣ, ಉಪೇಂದ್ರ ಹಾಗೂ ಧ್ರುವ ಸರ್ಜಾ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ.

ಆದರೆ, ಈ ಕಾರ್ಯಕ್ರಮಕ್ಕೆ ಸರ್ಕಾರದಿಂದ ಅನುಮತಿ ಸಿಗುತ್ತಾ ಎಂಬುದೇ ಇದೀಗ ಪ್ರಶ್ನೆಯಾಗಿದೆ. ಏಕೆಂದರೆ, ಕರೊನಾ ರೂಪಾಂತರಿ ಒಮಿಕ್ರಾನ್ ಹಿನ್ನಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಇತ್ತ ಚಿತ್ರತಂಡ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲು ತಯಾರಿ ನಡೆಸಿದ್ದು, ಇದಕ್ಕೆ ಸರ್ಕಾರ ಅನುಮತಿ ಕೊಡುತ್ತಾ ಕಾದು ನೋಡಬೇಕಿದೆ. (ದಿಗ್ವಿಜಯ ನ್ಯೂಸ್​)