ಹೈದರಾಬಾದ್: ರಾಮ್ಚರಣ್ ತೇಜ ಪ್ಯಾನ್ ಇಂಡಿಯಾ ನಟರಾಗಿಬಿಟ್ಟಿದ್ದಾರೆ. ಈಗಾಗಲೇ ಅವರ 'ಆರ್ಆರ್ಆರ್' ಚಿತ್ರವು ದೊಡ್ಡ ಸಕ್ಸಸ್ ಕಂಡಿದೆ. ಅದರ ನಂತರ ಶಂಕರ್ ಅಭಿನಯದ ಹೊಸ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಈಗ ಇನ್ನೊಂದು ಪ್ಯಾನ್ ಇಂಡಿಯಾ ಚಿತ್ರವನ್ನು ರಾಮ್ಚರಣ್ ಒಪ್ಪಿಕೊಂಡಿದ್ದಾರೆ.
ಇಂದು ರಾಮ್ಚರಣ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಅಭಿನಯದ ಇನ್ನೊಂದು ಹೊಸ ಪ್ಯಾನ್ ಇಂಡಿಯಾ ಚಿತ್ರ ಅಧಿಕೃತವಾಗಿ ಘೋಷಣೆಯಾಗಿದೆ. ಕಳೆದ ವರ್ಷ ಬಿಡುಗಡೆಯಾಗಿ ಬ್ಲಾಕ್ಬಸ್ಟರ್ ಆದ 'ಉಪ್ಪೆನಾ' ಚಿತ್ರವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ, ಈಗ ರಾಮ್ ಚರಣ್ ಅವರನ್ನು ಈ ಹೊಸ ಚಿತ್ರದಲ್ಲಿ ನಿರ್ದೇಶಿಸಲಿದ್ದಾರೆ. ಪ್ಯಾನ್ ಇಂಡಿಯಾಗೆ ಆಗುವ ಚಿತ್ರಕಥೆಯೊಂದನ್ನು ಬುಚ್ಚಿ ಬಾಬು ಸಿದ್ಧಪಡಿಸಿದ್ದು, ಈ ಚಿತ್ರದಲ್ಲಿ ನಟಿಸುವುದಕ್ಕೆ ರಾಮ್ ಚರಣ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಮೈತ್ರಿ ಮೂವಿ ಮೇಕರ್ಸ್ ಪ್ರಸ್ತುತಪಡಿಸುತ್ತಿರುವ ವೆಂಕಟ ಸತೀಶ್ ಕಿಲಾರು ಅವರು ವೃದ್ಧಿ ಸಿನಿಮಾಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳ ಅಡಿಯಲ್ಲಿ ಅದ್ದೂರಿ ಬಜೆಟ್ನಲ್ಲಿ ನಿರ್ಮಾಣವಾಗುತ್ತಿರುವ ಈ ಹೆಸರಿಡದ ಚಿತ್ರದ ಮುಂದಿನ ವರ್ಷ ಪ್ರಾರಂಭವಾಗಲಿದೆ.
ಸದ್ಯ ಶಂಕರ್ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣದಲ್ಲಿ ರಾಮ್ಚರಣ್ ತೇಜ ಭಾಗವಹಿಸಿದ್ದು, ಈ ಚಿತ್ರದ ಚಿತ್ರೀಕರಣ ಮುಗಿಯುತ್ತಿದ್ದಂತೆಯೇ, ಬುಚ್ಚಿ ಬಾಬು ಸನಾ ನಿರ್ದೇಶನದ ಹೊಸ ಚಿತ್ರ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಚಿತ್ರದ ತಾರಾಬಳಗ ಮತ್ತು ತಾಂತ್ರಿಕ ವರ್ಗದ ಅಧಿಕೃತ ಘೋಷಣೆ ಆಗಲಿದೆ.