ಸಿನಿವಾಣಿ

ಕಾರ್ಮಿಕರ ಮೇಲೆ ಪುಷ್ಪವೃಷ್ಟಿ ... ರಮೇಶ್ ಅರವಿಂದ್‌ರಿಂದ ಹೀಗೊಂದು ಅಭಿನಂದನೆ

chetannadiger

ಆ ಕಡೆ ‘ರಾಬರ್ಟ್’ ಚಿತ್ರತಂಡದವರು ಚಿತ್ರಕ್ಕೆ ದುಡಿದ ಕಾರ್ಮಿಕರಿಗೆ ವೀಡಿಯೋ ಮೂಲಕ ಕೃತಜ್ಞತೆ ಸಲ್ಲಿಸಿದರೆ, ಈ ಕಡೆ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರು ಪೌರ ಕಾರ್ಮಿಕರಿಗೆ ಪುಷ್ಪವೃಷ್ಟಿ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

‘ಕಾರ್ಮಿಕರ ದಿನ’ವಾದ ಇಂದು ರಮೇಶ್ ಅರವಿಂದ್ ಅವರು ರಸ್ತೆಯಲ್ಲಿ ಕಸ ಗುಡಿಸುವ ಪೌರ ಕಾರ್ಮಿಕರಿಗೆ ಪುಷ್ಪವೃಷ್ಟಿ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಅಭಿನಂದಿಸಿದ್ದಾರೆ.

ಈ ಕುರಿತು ಫೇಸ್​ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಅವರಿಲ್ಲದೆ ನಮ್ಮ ಜೀವನವನ್ನು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ಎಲ್ಲರಿಗೂ ಕಾರ್ಮಿಕರ ದಿನಾಚರಣೆಯ ಶುಭಾಶಯಗಳು’ ಎಂದು ರಮೇಶ್ ಅರವಿಂದ್ ಅಭಿನಂದನೆ ಸಲ್ಲಿಸಿದ್ದಾರೆ.

ಈಗಾಗಲೇ ‘100’ ಎಂಬ ಚಿತ್ರವನ್ನು ನಿರ್ದೇಶಿಸಿರುವ ರಮೇಶ್ ಅರವಿಂದ್, ಅದರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲಾಕ್‌ಡೌನ್ ಇಲ್ಲದಿದ್ದರೆ ಇಷ್ಟರಲ್ಲಿ ಆ ಚಿತ್ರ ಬಿಡುಗಡೆಯಾಗಿರಬೇಕಿತ್ತು. ಲಾಕ್‌ಡೌನ್ ಮುಗಿದ ನಂತರ ಆ ಚಿತ್ರ ಬಿಡುಗಡೆಯಾಗಲಿದೆ.