ಬೆಂಗಳೂರು: ಸ್ವಾಂಡಲ್ವುಡ್ ಕ್ವೀನ್ ರಮ್ಯಾ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಮೂಲಕ ಕಂಬ್ಯಾಕ್ ಮಾಡಲು ಸಿದ್ಧವಾಗಿದ್ದರು. ರಾಜ್ ಬಿ. ಶೆಟ್ಟಿ ಈ ಸಿನಿಮಾವನ್ನು ನಿರ್ದೇಶಿಸಲು ಸಜ್ಜಾಗಿದ್ದರು. ದಸರಾ ಹಬ್ಬದಂದು ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುವ ಸುದ್ದಿ ನೀಡಿದ್ದ ರಮ್ಯಾ, ಇದೀಗ ಈ ಸಿನಿಮಾದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ.
ರಮ್ಯಾ ಈ ಸಿನಿಮಾದಿಂದ ಹೊರಬರುತ್ತಿದ್ದಂತೆ, ಅವರ ಸ್ಥಾನಕ್ಕೆ ಸಿರಿ ರವಿಕುಮಾರ್ ಆಯ್ಕೆಯಾಗಿದ್ದಾರೆ. ಈ ಪಾತ್ರಕ್ಕೆ ಹೊಸ ಮುಖ ಪರಿಚಯ ಮಾಡಬೇಕೆಂದು ರಮ್ಯಾ ನಿರ್ಧರಿಸಿದ್ದಾರೆ. ಉದಯೋನ್ಮುಖ ಪ್ರತಿಭೆಗಳನ್ನು ಬೆಳಕಿಗೆ ತರುವ ಗುರಿಯನ್ನಿಟ್ಟುಕೊಂಡು ಪ್ರಾರಂಭಿಸಿದ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್. ಸ್ವಾತಿ ಮುತ್ತಿನ ಮಳೆ ಹನಿಯೇ ಒಂದು ಅಮೋಘವಾದ ಚಿತ್ರವಾಗಿ ನಿಮ್ಮ ಮುಂದೆ ಪ್ರಸ್ತುತ ಪಡಿಸಲು ನಾವು ಕಾತುರರಾಗಿದ್ದೇವೆ’ ಎಂದು ರಮ್ಯಾ ಹೇಳಿದ್ದಾರೆ.
ರಮ್ಯಾ ಅವರು ಇನ್ನು ಕೆಲವೇ ದಿನಗಳಲ್ಲಿ ಮತ್ತೆ ಬೆಳ್ಳಿಪರದೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ನೀವೆಲ್ಲರೂ ಕಾಯುತ್ತಿದ್ದೀರೆಂದು ನಮಗೆ ಅರಿವಿದೆ’ ಎಂದು ಆಪಲ್ ಬಾಕ್ಸ್ ಸ್ಟುಡಿಯೋಸ್ ತಿಳಿಸಿದೆ.