ಸಿನಿವಾಣಿ

ರಶ್ಮಿಕಾ ಮಂದಣ್ಣ ಅವರನ್ನು ಬ್ಯಾನ್ ಮಾಡಲು ಸಾಧ್ಯವಿಲ್ಲ… ಈ ಬಗ್ಗೆ ಯಾವುದೇ ದೂರು ಬಂದಿಲ್ಲ!

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಹೆಸರು ಕಳೆದ ಎರಡು ವಾರಗಳಿಂದ ಸದಾ ಸುದ್ದಿಯಲ್ಲಿದೆ. ಕನ್ನಡ ಚಿತ್ರರಂಗದ ಮೂಲಕ ಸಿನಿರಂಗ ಪ್ರವೇಶಿಸಿದ ರಶ್ಮಿಕಾ, ನಂತರದಲ್ಲಿ ಬಹುಭಾಷಾ ನಟಿಯಾಗಿ ಮಿಂಚಿದರು. ಜತೆಗೆ ತೆಲುಗು ಚಿತ್ರರಂಗದಲ್ಲಿ ಸಾಲು ಸಾಲು ಸಿನಿಮಾಗಳನ್ನು ಮಾಡಿ ಸಕ್ರೀಯವಾದರು. ಈ ನಡುವೇ ರಶ್ಮಿಕಾ ಮಂದಣ್ಣ, ಕನ್ನಡ ಚಿತ್ರರಂಗವನ್ನು ಮರೆತಿದ್ದಾರೆ, ತಮ್ಮ ಮೊದಲ ಸಿನಿಮಾ ಹಾಗೂ ಅದರ ನಿರ್ದೇಶಕರನ್ನು ನೆನಪಿಸಿಕೊಳ್ಳುತ್ತಿಲ್ಲಾ ಎಂಬೆಲ್ಲಾ ಮಾತುಗಳು ಕೇಳಿಬಂದಿತ್ತು.

ರಶ್ಮಿಕಾ ಮಂದಣ್ಣ ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಿರೂಪಕಿ ಕೇಳಿದ ಪ್ರಶ್ನೆಗೆ ಉತ್ತಿರಿಸುತ್ತಾ, ತನಗೆ ಮೊದಲ ಬಾರಿಗೆ ಅವಕಾಶ ಕೊಟ್ಟವರ ಹೆಸರು ಹೇಳಲು ಹಿಂದೇಟು ಹಾಕಿದ್ದರು. ರಶ್ಮಿಕಾ ಮಂದಣ್ಣ ಈ ನಡೆ ಕನ್ನಡದ ಅಭಿಮಾನಿಗಳ ಟೀಕೆಗೆ ಕಾರಣವಾಗಿತ್ತು.

ಈ ನಡುವೆ ರಶ್ಮಿಕಾ ಮಂದಣ್ಣ ಅವರನ್ನು ಕನ್ನಡ ಸಿನಿಮಾದಿಂದ ಬ್ಯಾನ್ ಮಾಡಲಾಗಿದೆ ಎಂದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಾಗುತ್ತಿದ್ದಂತೆ

ಕಿರಿಕ್‌ ಬೆಡಗಿ, ನ್ಯಾಷುನಲ್‌ ಕ್ರಷ್‌, ರಶ್ಮಿಕಾ ಮಂದಣ್ಣ ಅವರಿಗೆ ಕರುನಾಡಿನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ 'ರಶ್ಮಿಕಾ ಮಂದಣ್ಣ ಬ್ಯಾನ್‌...'ರಶ್ಮಿಕಾ ಬಾಯ್ಕಾಟ್‌' ಎಂಬ ಹ್ಯಾಷ್‌ ಟ್ಯಾಗ್‌ಗಳು ಟ್ರೇಡಿಂಗ್ ಆಗುತ್ತಿವೆ.

ಕನ್ನಡ ಸಿನಿಮಾದಿಂದ ರಶ್ಮಿಕಾ ಅವರನ್ನು ಬ್ಯಾನ್‌ ಮಾಡಲಾಗಿದೆ ಎಂಬ ಸುದ್ದಿಗೆ ಇದೀಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರನ್ನ ಬ್ಯಾನ್ ಮಾಡೋ ರೈಟ್ಸ್‌ ನಮಗೆ ಇಲ್ಲಾ. ಈ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ. ಅವರನ್ನು ಬ್ಯಾನ್ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.