ಮುಂಬೈ: ಬಾಲಿವುಡ್ ನಟ ಸುಶಾತ್ ಸಿಂಗ್ ರಜಪೂತ್ ಸಾವಿನ ಸುತ್ತ ಮಾದಕ ಜಾಲದ ನಂಟಿರುವ ಆರೋಪ ಕುರಿತು ತನಿಖೆ ನಡೆಸುತ್ತಿರುವ ಮಾದಕ ದ್ರವ್ಯ ನಿಯಂತ್ರಣ ಸಂಸ್ಥೆ (ಎನ್ಸಿಬಿ) ಇದೀಗ ಬಾಲಿವುಡ್ನ ಮೂವರು ಕಲಾವಿದರ ಹೆಸರನ್ನು ಪಟ್ಟಿ ಮಾಡಿರುವುದಾಗಿ ತಿಳಿದುಬಂದಿದೆ.
ಡ್ರಗ್ಸ್ ಸೇವಿಸುತ್ತಿರುವ ಪಟ್ಟಿಯಲ್ಲಿ ನಟಿಯರಾದ ಸಾರಾ ಅಲಿ ಖಾನ್ ಮತ್ತು ರಾಕುಲ್ ಪ್ರೀತ್ ಸಿಂಗ್ ಹೆಸರು ಕೇಳಿಬಂದಿದ್ದು, ನಟಿ ಸಿಮನ್ ಖಾಂಭಟ್ಟ ಹೆಸರು ಮಾದಕ ಜಾಲದ ಪಟ್ಟಿಯಲ್ಲಿ ಸೇರಿರುವುದಾಗಿ ವರದಿಯಾಗಿದೆ.
ಈಗಾಗಲೇ ಬಾಲಿವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಬಂಧಿಯಾಗಿರುವ ರಿಯಾ ಚಕ್ರವರ್ತಿಯ ವಿಚಾರಣೆ ವೇಳೆ ಈ ಮೂವರ ಹೆಸರು ಬಹಿರಂಗವಾಗಿದೆ. ಇಷ್ಟೇ ಅಲ್ಲದೆ, ಸುಮಾರು 25 ಬಾಲಿವುಡ್ ಸೆಲೆಬ್ರಿಟಿಗಳ ಪಟ್ಟಿಯನ್ನು ಎನ್ಸಿಬಿ ಸಿದ್ಧಪಡಿಸಿದೆ ಎಂದು ತಿಳಿದುಬಂದಿದೆ.
ರಿಯಾ, ಬಾಯ್ಫ್ರೆಂಟ್ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಮತ್ತು ಡ್ರಗ್ ಮಾಫಿಯಾದ ಆರೋಪಿಯಾಗಿದ್ದಾರೆ. ಬಂಧನವಾಗಿರುವ ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಸದ್ಯ ರಿಯಾ ಬೈಕುಲ್ಲಾ ಜೈಲಿನಲ್ಲಿ ಉಳಿಯಲಿದ್ದು, ಸೆಪ್ಟೆಂಬರ್ 22 ರವರೆಗೆ ಅವರನ್ನು ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ. (ಏಜೆನ್ಸೀಸ್)