ಬೆಂಗಳೂರು: ಸ್ಯಾಂಡಲ್ವುಡ್ನ ಗೋಲ್ಡನ್ ಸ್ಟಾರ್, ನಟ ಗಣೇಶ್ ಅಭಿನಯದ ಬಹುನಿರೀಕ್ಷಿತ 'ಬಾನದಾರಿಯಲ್ಲಿ' ಸಿನಿಮಾದ ಟ್ರೇಲರ್ ಲಾಂಚ್ ಈವೆಂಟ್ ಬೆಂಗಳೂರಿನ ಮಂತ್ರಿಮಾಲ್ನಲ್ಲಿ ಅದ್ದೂರಿಯಾಗಿ ನಡೆದಿದ್ದು, ಕಾರ್ಯಕ್ರಮದಲ್ಲಿ ಗಣೇಶ್ ಭಾವುಕರಾಗಿದ್ದಾರೆ.
ನಗರದ ಮಂತ್ರಿಮಾಲ್ನಲ್ಲಿ ಅದ್ದೂರಿಯಾಗಿ ನಡೆದ 'ಬಾನದಾರಿಯಲ್ಲಿ' ಚಿತ್ರದ ಟ್ರೇಲರ್ ಈವೆಂಟ್ನಲ್ಲಿ ಖ್ಯಾತ ನಟ-ನಟಿಯರು ಭಾಗಿಯಾಗಿದ್ದರು. ಚಿತ್ರದಲ್ಲಿ ನಟಿ ರುಕ್ಮಿಣಿ ವಸಂತ್ ಹಾಗೂ ರೀಷ್ಮ ನಾನಯ್ಯ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ನಟಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪವರ್ ಸ್ಟಾರ್, ನಟ ಪುನೀತ್ ರಾಜ್ಕುಮಾರ್ ಅವರನ್ನು ನೆನೆದ ಗಣೇಶ್, ಅಪ್ಪುಗಾಗಿ 'ಬಾನದಾರಿಯಲ್ಲಿ ಸೂರ್ಯ ಜಾರಿ ಹೋದ' ಹಾಡನ್ನು ಹಾಡಿದರು. ಕೀನ್ಯಾದಲ್ಲಿ ನಡೆದ ಶೂಟಿಂಗ್ ಬಗ್ಗೆ ಸಂತಸ ವ್ಯಕ್ತಪಡಿಸಿದ ನಟ, ಚಿತ್ರದ ನಿರ್ದೇಶಕ ಪ್ರೀತಮ್ ಗುಬ್ಬಿ ಅವರ ತಾಯಿಯನ್ನು ನೆನೆದು ಭಾವುಕರಾದರು.
ಇದನ್ನೂ ಓದಿ: ಗೋಲ್ಡನ್ ಸ್ಟಾರ್ ಗಣೇಶ್ ಕಟ್ಟಡ ಅನುಮತಿ ರದ್ದು
ಕೆಆರ್ಜಿ ಸ್ಟುಡಿಯೋಸ್ ನಿರ್ಮಾಣದ ಚಿತ್ರ ಇದಾಗಿದ್ದು, ಶ್ರೀವಾರಿ ಅವರ ಚೊಚ್ಚಲ ನಿರ್ಮಾಣದಲ್ಲಿ ಚಿತ್ರ ಮೂಡಿಬಂದಿದೆ. ಪ್ರೀತಮ್ ಗುಬ್ಬಿ ಮತ್ತು ಗಣೇಶ್ ಕಾಂಬಿನೇಷನ್ನ ಮೂರನೇ ಚಿತ್ರಕ್ಕೆ ಇದೀಗ ಸಾಕಷ್ಟು ನಿರೀಕ್ಷೆ ವ್ಯಕ್ತವಾಗಿದ್ದು, ಇದೇ ಸೆಪ್ಟಂಬರ್ 28ಕ್ಕೆ ರಾಜ್ಯಾದ್ಯಂತ ಬಹುತೇಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.