ಕನ್ನಡದ ನಟಿ ಅಮೂಲ್ಯ ಇಂದು ಬೆಳಗ್ಗೆ 11.45ಗೆ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳು ಹಾಗೂ ತಾಯಿ ಅಮೂಲ್ಯ ಅವರು ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಅಭಿಮಾನಿಗಳಿಗೆ ಸಾಮಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅಂದಹಾಗೆ, ಇನ್ಸ್ಟಾಗ್ರಾಂನಲ್ಲಿ ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಈ ಸಂತೋಷದ ಸುದ್ದಿಯ ಬಗ್ಗೆ ಬರೆದುಕೊಂಡಿದ್ದಾರೆ. ದಂಪತಿಗಳ ಈ ಪಯಣದಲ್ಲಿ ಜತೆ ನಿಂತ ಎಲ್ಲರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ. ನಟಿ ಅಮೂಲ್ಯ ಅವರು ಜಯನಗರದ ಕ್ಲೈಡ್ ನೈಟ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 11.45ಕ್ಕೆ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ.
ಇನ್ನು, ನಟಿ ಆಶಿಕಾ ರಂಗನಾಥ್, ಅದ್ವಿತಿ ಶೆಟ್ಟಿ, ಹರ್ಷಿಕಾ ಪೂಣಚ್ಚ, ಸೋನು ಗೌಡ ಸೇರಿ ಹಲವಾರು ಸ್ಯಾಂಡಲ್ವುಡ್ ಮಂದಿ ಈ ಮುದ್ದಾದ ದಂಪತಿಗೆ ಹಾಗೂ ಅವರ ಮಕ್ಕಳಿಗೆ ಶುಭ ಹಾರೈಸಿದ್ದಾರೆ. ಸದ್ಯ, ನಟಿಯ ಪತಿ ಈ ಮಾಹಿತಿ ಹಂಚಿಕೊಂಡ ಪೋಸ್ಟ್ಗೆ ಸಾವಿರ ಸಾವಿರ ಲೈಕ್ಸ್, ಕಾಮೆಂಟ್ಗಳು ಬರುತ್ತಿದ್ದು, ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.