ಸ್ಯಾಂಡಲ್‌ವುಡ್

ಹಾಸನಾಂಬ ದರ್ಶನ ಪಡೆದ ದೀಪಿಕಾ! Deepika Das

Deepika Das: ದೀಪಾವಳಿ ಹಬ್ಬದ ಪ್ರಯುಕ್ತ ಹಾಸನ ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬಾ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ವರ್ಷಕ್ಕೊಮ್ಮೆ ನಡೆಯುವ ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಇತ್ತೀಚೆಗೆ ನಾಗಿಣಿ ಧಾರಾವಾಹಿ ಹಾಗೂ ಬಿಗ್​ಬಾಸ್​ ಖ್ಯಾತಿಯ ನಟಿ ದೀಪಿಕಾ ದಾಸ್​ ಕೂಡ ಹಾಸನಾಂಬೆಯ ದರ್ಶನ ಪಡೆದಿದ್ದು, ಅಲ್ಲಿ ಕ್ಲಿಕ್​ಕಿಸಿಕೊಂಡ ಕೆಲ ಫೋಟೊಗಳನ್ನು ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ವಿಜಯವಾಣಿ ಸುದ್ದಿ ಜಾಲ