ಸಿನಿವಾಣಿ

ಕನ್ನಡ ಚಿತ್ರರಂಗದ ಹಾಸ್ಯನಟ ಮೈಕಲ್ ಮಧು ಹೃದಯಾಘಾತದಿಂದ ನಿಧನ...

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಮೈಕಲ್​ ಮಧು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೈಕಲ್​ ಮಧು ಅವರು ಇಂದು ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ಕುಳಿತಿದ್ದಾಗ ಒಮ್ಮೆಲೆ ಕೆಳಗೆ ಬಿದ್ದು ನರಳಾಡಿದ್ದರು. ಕೂಡಲೆ ಅವರನ್ನು ಕಿಮ್ಸ್​ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಾಳೆ ಬೆಳಗ್ಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

90ರ ದಶಕದಲ್ಲಿ ಸಿನಿಮಾ ರಂಗ ಪ್ರವೇಶ ಮಾಡಿದ ನಟ ಮೈಕಲ್​ ಮಧು 90ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಮುಖ್ಯವಾಗಿ ಸೂರ್ಯವಂಶ , ಓಂ, ಶ್​ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದರು.