ಹಲಗಲಿ ಚಿತ್ರದಲ್ಲಿ ಡಾಲಿ ಧನಂಜಯ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಲಲಿದ್ದಾರೆ ಅನ್ನೋ ವಿಚಾರ ಎಲ್ಲರಿಗೂ ತಿಳಿದೇ ಇದೆ. ಆ ಚಿತ್ರಕ್ಕೆ ನಾಯಕಿಯಾಗಿ ಇದೀಗ ಕಾಂತಾರ ಖ್ಯಾತಿಯ ಬೆಡಗಿ ಸಪ್ತಮಿ ಗೌಡ ಆಯ್ಕೆ ಆಗಿದ್ದಾರೆ. ಬಹು ತಾರಾಗಣದ ಅದ್ಧೂರಿ ಬಜೆಟ್ ಚಿತ್ರ ‘ಹಲಗಲಿ’ ಈಗಾಗಲೇ ಸಾಕಷ್ಟು ಸದ್ದು ಮಾಡಿದ್ದು, ಚಿತ್ರೀಕರಣಕ್ಕೆ ಅಣಿಯಾಗುತ್ತಿದೆ.
ಐದು ಭಾಷೆಯಲ್ಲಿ ಅದ್ದೂರಿಯಾಗಿ ಸೆಟ್ಟೇರಿರುವ ಕನ್ನಡದ ಐತಿಹಾಸಿಕ ಸಿನಿಮಾದಲ್ಲಿ ಕನ್ನಡ ಸೇರಿದಂತೆ ಬಹುಭಾಷಾ ನಟರೂ ಇರಲಿದ್ದಾರೆ. ಡಾಲಿ ಧನಂಜಯ ಅವರ ವೃತ್ತಿ ಪಯಣದಲ್ಲಿ ಮತ್ತೊಂದು ಮೈಲುಗಲ್ಲಿನ ಚಿತ್ರವಿದು. ಇಲ್ಲಿವರೆಗೂ ಅವರನ್ನು ತೆರೆ ಮೇಲೆ ವಿಭಿನ್ನ ಪಾತ್ರಗಳಲ್ಲಿ ನೋಡಿ ಮೆಚ್ಚಿದ್ದ ಪ್ರೇಕ್ಷಕರು, ಈಗ ವಾರಿಯರ್ ಪಾತ್ರದಲ್ಲಿ ನೋಡಲಿದ್ದಾರೆ.
ನಿರ್ದೇಶಕ ಸುಕೇಶ್ ಡಿ ಕೆ. ಇಂಥದ್ದೊಂದು ಬಹು ದೊಡ್ಡ ಬಜೆಟ್ ಚಿತ್ರಕ್ಕೆ ಬಂಡವಾಳ ಹೂಡುವ ಮೂಲಕ ನಿರ್ಮಾಪಕರಾಗಿರುವುದು ಯುವ ಉದ್ಯಮಿ ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ. ತಮ್ನ ದುಹರ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಿಸುತ್ತಿದ್ದಾರೆ. ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ತೆಲಗಿನಲ್ಲಿ ರಚಯತ ಚಿತ್ರವನ್ನು ನಿರ್ಮಿಸಿ, 20ಕ್ಕೂ ಹೆಚ್ಚು ಚಿತ್ರಗಳನ್ನು ಕನ್ನಡ ಹಾಗೂ ತೆಲುಗಿನಲ್ಲಿ ವಿತರಣೆ ಮಾಡಿದ್ದಾರೆ.
ಸಿನಿಮಾದಲ್ಲಿ ವಾಸುಕಿ ವೈಭವ್ ಸಂಗೀತವೂ ಇದೆ. ಚಿತ್ರಕ್ಕಾಗಿ ನಾಲ್ಕೈದು ಬೃಹತ್ ಹಳ್ಳಿಯ ಸೆಟ್ ಗಳನ್ನು ಹಾಕುತ್ತಿದ್ದು, ಹಲಗಲಿ ಊರಿನ ಸೆಟ್ ಅನ್ನೇ ವಿಶೇಷವಾಗಿ ನಿರ್ಮಿಸಲಾಗುತ್ತಿರುವುದು ವಿಶೇಷ.