ಸಿನಿವಾಣಿ

ಸಿನಿಮಾಗೆ ಎಂಟ್ರಿ ಕೊಡುವ ಮುನ್ನ ನಯನತಾರಾ ಹೇಗಿದ್ದರು ಗೊತ್ತಾ? ಇಲ್ಲಿದೆ ನೋಡಿ ಅಪರೂಪದ ಫೋಟೋ | Nayanthara

Nayanthara : ಸಿನಿಪ್ರಿಯರಿಗೆ ಹೀರೋ ಮತ್ತು ಹೀರೋಯಿನ್​ಗಳ ವೈಯಕ್ತಿಕ ಮಾಹಿತಿ ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಅವರು ಬಳಸುವ ಕಾರುಗಳು, ದಿನನಿತ್ಯ ಜೀವನದಲ್ಲಿ ಅವರ ಹವ್ಯಾಸಗಳು, ಧರಿಸುವ ಬಟ್ಟೆ, ಮೊಬೈಲ್​ ಹಾಗೂ ವಾಚ್​ ಬೆಲೆ ಎಷ್ಟು? ವಾಸಿಸುವ ಮನೆ ಎಷ್ಟು ಬೆಲೆ ಬಾಳುತ್ತದೆ? ಮತ್ತು ಯಾವ ಯಾವ ವಸ್ತುಗಳನ್ನು ಆಗಾಗ ಬಳಕೆ ಮಾಡುತ್ತಾರೆ? ಎಂಬಿತ್ಯಾದಿ ವಿಚಾರಗಳನ್ನು ತಿಳಿದುಕೊಳ್ಳಲು ಬಯಸುತ್ತಾರೆ. ಇದಿಷ್ಟೇ ಅಲ್ಲದೆ, ಬಾಲ್ಯದಲ್ಲಿ ಹೇಗಿದ್ದರು? ಸಿನಿಮಾಗೆ ಬರುವ ಮುಂಚೆ ಹೇಗೆ ಕಾಣುತ್ತಿದ್ದರು ಎಂದು ತಿಳಿದುಕೊಳ್ಳುವ ಕುತೂಹಲವೂ ಜಾಸ್ತಿ ಇರುತ್ತದೆ.

ಇಂದು ಲೇಡಿ ಸೂಪರ್​ ಸ್ಟಾರ್​ ಎಂದೇ ಖ್ಯಾತಿಯಾಗಿರುವ ನಯನತಾರಾ ಆರಂಭದಲ್ಲಿ ಆ್ಯಂಕರ್ ಆಗಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದವರು. ಸೌತ್​​ ಇಂಡಸ್ಟ್ರಿಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ, ಇದೀಗ ಬಾಲಿವುಡ್ ಇಂಡಸ್ಟ್ರಿಯಲ್ಲೂ ಯಶಸ್ಸ ಗಳಿಸಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದರು ನಯನತಾರಾ ಕ್ರೇಜ್​ ಮಾತ್ರ ಕಮ್ಮಿ ಆಗಿಲ್ಲ. ಈಗಲೂ ಅವರ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಎಂತಹ ಬಿಜಿ ಲೈಫ್​ನಲ್ಲೂ ಕುಟುಂಬಕ್ಕೆ ಸಮಯ ಕೊಡುವುದನ್ನು ನಯನತಾರಾ ಮರೆಯಲ್ಲ. ಈಗಾಗಲೇ 75 ಚಿತ್ರಗಳನ್ನು ಮುಗಿಸಿರುವ ಈ ಲೇಡಿ ಸೂಪರ್ ಸ್ಟಾರ್ ಇತ್ತೀಚಿನ ದಿನಗಳಲ್ಲಿ ನಾಯಕಿ ಪ್ರಧಾನ ಚಿತ್ರಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಎಷ್ಟೇ ಬಿಜಿ ಇದ್ದರೂ ಮಕ್ಕಳು, ಪತಿಯೊಂದಿಗೆ ಕಾಲ ಕಳೆಯುತ್ತಾರೆ.

ಪ್ರಸ್ತುತ ನಯನತಾರಾ ಅವರು ಮನ್ನಂಗಟ್ಟಿ, ಮೂಕ್ಕುಟ್ಟಿ ಅಮ್ಮನ್ 2, ಡಿಯರ್ ಸ್ಟೂಡೆಂಟ್ಸ್ ಮುಂತಾದ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದೆಲ್ಲದರ ನಡುವೆ ಇಂದು ನಯನತಾರಾ ಜೀವನ ಆಧಾರಿತ ಸಾಕ್ಷ್ಯಚಿತ್ರ Nayanthara: Beyond the Fairy Tale ಬಿಡುಗಡೆಯಾಗಿದೆ. ಇಂದು ನಯನತಾರಾ ಅವರ 39ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಸಾಕ್ಷ್ಯಚಿತ್ರ ಬಿಟುಗಡೆಯಾಗಲಿದೆ. ಮೊನ್ನೆಯಿಂದ ಈ ಸಾಕ್ಷ್ಯಚಿತ್ರದ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದಕ್ಕೆ ಕಾರಣ ಧನುಷ್ ಬಗ್ಗೆ ನಯನತಾರಾ ನೀಡಿರುವ ಹೇಳಿಕೆ. ಈ ವಿಚಾರ ಕಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತ ಚಿತ್ರರಂಗದಲ್ಲೂ ಸಂಚಲನ ಮೂಡಿಸಿದೆ.

ಅದೇನೆ ಇರಲಿ ಅಸಲಿ ವಿಚಾರದ ಕಡೆ ಬರೋಣ, ನಟಿ ನಯನತಾರಾ ಚಿತ್ರರಂಗ ಪ್ರವೇಶಿಸುವ ಮುನ್ನ ಕಿರುತೆರೆಯಲ್ಲಿ ಕೆಲಸ ಮಾಡಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಆದರೆ, ಆಗ ಅವರು ಹೇಗಿದ್ದರು ಎಂಬುದು ಹೆಚ್ಚಿನವರಿಗೆ ಗೊತ್ತಿಲ್ಲ. ಇದರ ನಡುವೆ ಟಿವಿ ಶೋ ಹೋಸ್ಟ್ ಮಾಡುವಾಗ ತೆಗೆದ ಫೋಟೋವೊಂದು ಈಗ ವೈರಲ್ ಆಗಿದೆ.

ಫೋಟೋ ನೋಡಿದವರು ನಯನತಾರಾ ಇಷ್ಟೊಂದು ಬದಲಾಗಿದ್ದಾರಾ? ಸಿನಿಮಾಗೆ ಬರುವ ಮುಂಚೆ ಈ ರೀತಿ ಇದ್ದ ನಯನತಾರಾ ಇಂದು ಹೇಗಾಗಿದ್ದಾರೆ ನೋಡಿ. ಅಂದಿಗಿಂತ ಇಂದು ನಯನತಾರಾ ತುಂಬಾ ಚೆನ್ನಾಗಿ ಕಾಣುತ್ತಿದ್ದಾರೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಕೆಲವರು ನಯನತಾರಾ ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ, ಪ್ರಶ್ನೆಗೆ ಬಹಳ ದಿನಗಳ ಹಿಂದೆಯೇ ನಯನತಾರಾ ಉತ್ತರ ಸಹ ನೀಡಿದ್ದು, ಪ್ಲಾಸ್ಟಿಕ್​ ಸರ್ಜರಿ ಆರೋಪವನ್ನು ನಿರಾಕರಿಸಿದ್ದಾರೆ.