ಬೆಂಗಳೂರು: ಕರೊನಾ ಕಾಲದಲ್ಲಿ ಅನೇಕ ನಟ-ನಟಿಯರು ಸಾಮಾಜಿಕ ಸೇವೆಗೆ ಮುಂದಾಗಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಕೂಡ ಈ ಸಂಕಷ್ಟದ ಸಮಯದಲ್ಲಿ ಕಾರ್ಮಿಕರಿಗೆ ನೆರವಾಗುವ ನಿಟ್ಟಿನಲ್ಲಿ ದೇಣಿಗೆ ನೀಡಿದ್ದಾರೆ.
ಶಿವರಾಜ್ ಕುಮಾರ್ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಮಗಳೂ ಗೀತಾ ಶಿವರಾಜ್ ಕುಮಾರ್ ಮಂಗಳವಾರದಂದು ಜನ್ಮ ದಿನ ಆಚರಿಸಿಕೊಂಡಿದ್ದಾರೆ. ಈ ವಿಶೇಷ ದಿನದಂದು ಶಿವಣ್ಣ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಅದರ ಜತೆ ಮನೆಯಲ್ಲಿ ಸರಳವಾಗಿ ಕೇಕ್ ಕತ್ತರಿಸುವ ಮೂಲಕ ಪತ್ನಿಯ ಜನ್ಮದಿನವನ್ನು ಆಚರಿಸಿದ್ದಾರೆ.