ಸಿನಿವಾಣಿ

ಕೂಲಿ ಸಿನಿಮಾ ಬಿಡುಗಡೆ ಹೊಸ್ತಿಲಲ್ಲೇ ನಟಿ ಶ್ರುತಿ ಹಾಸನ್ ಶಾಕಿಂಗ್​ ನಿರ್ಧಾರ: ಅಭಿಮಾನಿಗಳಿಗೆ ಬೇಸರ! Shruti Haasan

Shruti Haasan : ಸಾಮಾಜಿಕ ಜಾಲತಾಣದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುವ ನಾಯಕಿಯರಲ್ಲಿ ಶ್ರುತಿ ಹಾಸನ್ ಕೂಡ ಒಬ್ಬರು. ಸಿನಿಮಾ ಅಪ್​ಡೇಟ್​ಗಳ ಜೊತೆಗೆ, ತಮ್ಮ ವೈಯಕ್ತಿಕ ಮಾಹಿತಿಯನ್ನು ಸಹ ತಮ್ಮ ಅಭಿಮಾನಿಗಳೊಂದಿಗೆ ಶ್ರುತಿ ಹಂಚಿಕೊಳ್ಳುತ್ತಾರೆ. ಅಲ್ಲದೆ, ಆಗಾಗ್ಗೆ ತಮ್ಮ ಬೋಲ್ಡ್​ ಫೋಟೋಗಳನ್ನು ಸಹ ಹಂಚಿಕೊಳ್ಳುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿರುತ್ತಾರೆ.

ಶ್ರುತಿ ಅವರು ತಮ್ಮ ಇನ್​ಸ್ಟಾಗ್ರಾಂನಲ್ಲಿ 24 ಮಿಲಿಯನ್​ಗೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ. ಇದನ್ನು ನೋಡಿದರೆ ಅವರು ಸಾಮಾಜಿಕ ಜಾಲತಾಣದಲ್ಲಿ ಎಷ್ಟು ಆ್ಯಕ್ಟೀವ್​ ಆಗಿದ್ದಾರೆ ಅನ್ನೋದನ್ನು ನೀವು ಅರ್ಥಮಾಡಿಕೊಳ್ಳಬಹುದು. ಆದಾಗ್ಯೂ, ಇತ್ತೀಚೆಗೆ ಕಾಲಿವುಡ್​ ಸುಂದರಿ ಒಂದು ಸಂಚಲನಾತ್ಮಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅದೇನೆಂದರೆ, ಶ್ರುತಿ ಅವರು ಕೆಲವು ಸಮಯದವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರಲು ನಿರ್ಧರಿಸಿದ್ದಾರೆ. ಇದನ್ನು ತಮ್ಮ ಅಭಿಮಾನಿಗಳಿಗೆ ತಿಳಿಸಲು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ಕೆಲವು ದಿನಗಳ ಕಾಲ ಸಾಮಾಜಿಕ ಜಾಲತಾಣದಿಂದ ದೂರವಿದ್ದು, ಮೌನವನ್ನು ಆನಂದಿಸಲು ಬಯಸುತ್ತೇನೆ ಎಂದು ಶ್ರುತಿ ಹೇಳಿದ್ದಾರೆ. ಎಷ್ಟು ದಿನಗಳವರೆಗೆ ಎಂಬುದನ್ನು ಶ್ರುತಿ ತಿಳಿಸಿಲ್ಲ. ಕೂಲಿ ಸಿನಿಮಾ ಬಿಡುಗಡೆ ಹೊತ್ತಿನಲ್ಲಿ ಈ ಪೋಸ್ಟ್​ ಹಾಕಿದ್ದಾರೆ. ಮತ್ತೆ ಯಾವಾಗ ಆ್ಯಕ್ಟೀವ್​ ಆಗ್ತಾರೆ ಅಂತ ಕಾದು ನೋಡಬೇಕಿದೆ.

ಆದಾಗ್ಯೂ, ಶ್ರುತಿ ಹಾಸನ್​ ಅವರ ಟ್ವಿಟರ್ ಖಾತೆಯನ್ನು ಇತ್ತೀಚೆಗೆ ಯಾರೋ ಹ್ಯಾಕ್ ಮಾಡಿದ್ದಾರೆ ಎಂಬ ಸುದ್ದಿ ತಿಳಿದುಬಂದಿತ್ತು. ತಮ್ಮ ಖಾತೆಯನ್ನು ಶ್ರುತಿ ಅವರು ಮರುಪಡೆದಿದ್ದಾರೆಯೇ ಎಂಬುದನ್ನು ಬಹಿರಂಗಪಡಿಸಲಿಲ್ಲ. ಇದೇ ಸಂದರ್ಭದಲ್ಲಿ, ಶ್ರುತಿ ಅವರು ಸಾಮಾಜಿಕ ಜಾಲತಾಣದಿಂದ ವಿರಾಮ ತೆಗೆದುಕೊಳ್ಳುವುದಾಗಿ ಘೋಷಿಸಿದ್ದು, ಅದನ್ನು ಕೇಳಿ ಅಭಿಮಾನಿಗಳು ಆಘಾತಕ್ಕೆ ಒಳಗಾಗಿದ್ದಾರೆ.

ಶ್ರುತಿ ಹಾಸನ್ ಅವರ ಸಿನಿಮಾಗಳ ವಿಚಾರಕ್ಕೆ ಬರುವುದಾರೆ, ಅವರು ಪ್ರಸ್ತುತ ರಜನಿಕಾಂತ್ ನಟನೆಯ ಕೂಲಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಇದೇ ಆಗಸ್ಟ್ 14 ರಂದು ಬಿಡುಗಡೆಯಾಗಲಿದೆ. (ಏಜೆನ್ಸೀಸ್​)