ಈ ಚಿತ್ರದಲ್ಲಿ ಹಿತಾ ಚಂದ್ರಶೇಖರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ನಾವು ಬೇರೆ ಭಾಷೆಗಳಲ್ಲಿ ವಿಭಿನ್ನ ಕಥೆಯ ಚಿತ್ರಗಳು ಬಂದರೆ ಹೋಗಿ ನೋಡುತ್ತೇವೆ. ‘ತುರ್ತ ನಿರ್ಗಮನ’ ಕೂಡ ಒಂದು ಪ್ರಯೋಗಾತ್ಮಕ ಚಿತ್ರ’ ಎಂದು ಸಿನಿಮಾದ ಬಗ್ಗೆ ಮತ್ತಷ್ಟು ಮಾಹಿತಿ ಹಂಚಿಕೊಳ್ಳುತ್ತಾರೆ. ಇನ್ನು, ಚಿತ್ರದಲ್ಲಿ ಕ್ರಿಕೆಟ್ ಕೋಚ್ ಪಾತ್ರದಲ್ಲಿ ನಟಿಸಿರುವ ಸಂಯುಕ್ತಾ ಹೆಗ್ಡೆ, ‘ಈ ಸಿನಿಮಾ ಒಂದು ವಿಷುಯಲ್ ಟ್ರೀಟ್. ಗ್ರಾಫಿಕ್ ಅಂತೂ ಅದ್ಭುತ. ಹಾಗಾಗಿ ಇದನ್ನು ಮನೆಯಲ್ಲಿ ನೋಡುವುದಕ್ಕಿಂತ ಚಿತ್ರಮಂದಿರದಲ್ಲಿ ನೋಡಬೇಕು’ ಎನ್ನುತ್ತಾರೆ.
ರಾಜ್ ಬಿ. ಶೆಟ್ಟಿ, ಸುಧಾರಾಣಿ, ಅಮೃತಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಚಿತ್ರವು ಇದೇ ಜೂನ್ 24ರಂದು ತೆರೆಗೆ ಬರಲಿದೆ.