ಕಿಚ್ಚ ಸುದೀಪ್​ 
ಸಿನಿವಾಣಿ

ಖಾಸಗಿ ವಿಡಿಯೋ ಲೀಕ್​ ಮಾಡುವುದಾಗಿ ನಟ ಸುದೀಪ್​ಗೆ ಬೆದರಿಕೆ ಪತ್ರ: ದೂರು ದಾಖಲು

ಬೆಂಗಳೂರು: ನಟ ಕಿಚ್ಚ ಸುದೀಪ್​ ಅವರಿಗೆ ಬೆದರಿಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆದರಿಕೆ ಪತ್ರದ ಸಮೇತ ಸುದೀಪ್​ ಮ್ಯಾನೇಜರ್​ ಜಾಕ್​ ಮಂಜು ಅವರು ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಲಾಗಿದೆ.

ಸುದೀಪ್ ಖಾಸಗಿ ವಿಡಿಯೋ ಸೋರಿಕೆ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಅಲ್ಲದೆ, ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್​ನಲ್ಲಿ ದುಷ್ಕರ್ಮಿಗಳು ಬರೆದಿದ್ದಾರೆ. ಈ ಪತ್ರ ಸುದೀಪ್ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನನ್ವಯ ಐಪಿಸಿ 504 (ಬೆದರಿಕೆ), 506 (ಪ್ರಾಣ ಬೆದರಿಕೆ) ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಇದರ ನಡುವೆ ಇಂದು ಕಿಚ್ಚ ಸುದೀಪ್​, ಬಿಜೆಪಿ ಸೇರಲಿದ್ದಾರೆ ಎಂದು ಬಹಳ ಚರ್ಚೆಯಾಗುತ್ತಿದೆ. ಇಂದು ಸುದೀಪ್​​ ಕರೆದಿರುವ ಸುದ್ದಿಗೋಷ್ಠಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಬಿಜೆಪಿ ಸೇರ್ತಾರಾ ಅಥವಾ ಹೊಸ ಸಿನಿಮಾಗಳ ಬಗ್ಗೆ ಮಾಹಿತಿ ನೀಡ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡಿದ್ದು, ಇಂದು ಮಧ್ಯಾಹ್ನ ಎಲ್ಲ ಕುತೂಹಲಗಳಿಗೆ ತೆರೆ ಬೀಳಲಿದೆ. (ದಿಗ್ವಿಜಯ ನ್ಯೂಸ್​)