ಬೆಂಗಳೂರು: ಜನಪ್ರಿಯ ನಿರ್ದೇಶಕ ರಾಮ್ೋಪಾಲ್ ವರ್ವ ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕೇಳಿಬರá-ತ್ತಿದೆ. ಈ ಹಿಂದೆ, ಕನ್ನಡದಲ್ಲಿ ‘ಕಿಲ್ಲಿಂಗ್ ವೀರಪ್ಪನ್’ ನಿರ್ದೇಶಿಸಿದ್ದ ಆರ್ಜಿವಿ, ಈ ಬಾರಿ ಉಪೇಂದ್ರ ಅವರನ್ನು ಥ್ರಿಲ್ಲರ್ ಚಿತ್ರವೊಂದರಲ್ಲಿ ನಿರ್ದೇಶಿಸಲಿದ್ದಾರಂತೆ. ಇಂದು ಉಪೇಂದ್ರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಈ ಚಿತ್ರದ ಬಗ್ಗೆ ಅಧಿಕೃತ ಘೊಷಣೆ ಹೊರಬೀಳುವ ನಿರೀಕ್ಷೆ ಇದೆ.
ಈ ಮಧ್ಯೆ, ಓಂಪ್ರಕಾಶ್ ರಾವ್ ನಿರ್ದೇಶನದ ಇನ್ನೊಂದು ಚಿತ್ರದಲ್ಲಿ ನಟಿಸುವುದಕ್ಕೆ ಉಪೇಂದ್ರ ಒಪ್ಪಿಕೊಂಡಿದ್ದಾರೆ. ಅದೇ ‘ಯಮರಾಜ’. ಆರ್. ಕೇಶವ್ ನಿರ್ವಿುಸುತ್ತಿರುವ ಈ ಚಿತ್ರವನ್ನು ಓಂಪ್ರಕಾಶ್ ರಾವ್ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಎಂ.ಎಸ್. ರಮೇಶ್ ಸಂಭಾಷಣೆ ಬರೆಯುತ್ತಿದ್ದು, ಧರ್ಮವಿಶ್ ಸಂಗೀತ ಸಂಯೋಜಿಸುತ್ತಿದ್ದಾರೆ.