ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ 'ತುಳಸಿ ದಳ'ದಂತಹ ಹಾರರ್ ಚಿತ್ರವನ್ನು ಕೊಟ್ಟವರು ಹಿರಿಯ ನಿರ್ದೇಶಕ ವೇಮಗಲ್ ಜಗನ್ನಾಥ್ ರಾವ್. ಈ ಚಿತ್ರದ ಮೂಲಕ ಜನರನ್ನು ಬೆಳ್ಳಿಬೀಳಿಸಿದ್ದ ಅವರು, ನಂತರದ ದಿನಗಳಲ್ಲಿ ಹಲವು ರೀತಿಯ ಪ್ರಯೋಗಗಳನ್ನು ಮಾಡುತ್ತಲೇ ಬಂದಿದ್ದಾರೆ. ಇದೀಗ ಅವರು ಸದ್ದಿಲ್ಲದೆ 'ಆವರ್ತ' ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಇದನ್ನೂ ಓದಿ: ಕಾಶ್ಮೀರದಲ್ಲಿ ಕನ್ನಡದ ಆಲ್ಬಂ ಸಾಂಗ್ ‘ನಿನದೇ ನೆನಪು’ …
'ಆವರ್ತ' ಒಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದ್ದು, ಇದರ ಮೂಲಕ ಕನ್ನಡ ಚಿತ್ರರಂಗಕ್ಕೆ ಧನ್ವಿತ್ ಎಂಬ ನವನಟ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ತನಿಖಾಧಿಕಾರಿಯಾಗಿ ಧನ್ವಿತ್ ಕಾಣಿಸಿಕೊಂಡಿದ್ದಾರೆ.
ಹಿರಿಯ ನಟರಾದ ಶಿವರಾಮಣ್ಣ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಿಕ್ಕಂತೆ ನಯನಾ, ಮೇಘನಾ ಗೌಡ, ರಾಮರಾವ್, ಮುಂತಾದವರು ಅಭಿನಯಿಸಿದ್ದಾರೆ. ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಅತಿಶಯ ಜೈನ್ ಸಂಗೀತ ಮತ್ತು ಮಲ್ಲಿಕಾರ್ಜುನ್ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಮಡಿಕೇರಿ, ಉಡುಪಿ, ಬೆಂಗಳೂರಿನಲ್ಲಿ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.