ಬೆಂಗಳೂರು: ಹಿರಿಯ ನಿರ್ದೇಶಕ ಮತ್ತು ನಟರಾಗಿಯೂ ಗುರುತಿಸಿಕೊಂಡಿದ್ದ ಭಗವಾನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ, ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಹೇಳಲಾಗುತ್ತಿದೆ.
ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಭಗವಾನ್ ಅವರನ್ನು ಶನಿವಾರ ಬೆಳಗ್ಗೆಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಐಸಿಯೂನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರದಿಂದ ಇಂದು ಬೆಳಗ್ಗಿನವರೆಗೆ ಅವರಿಗೆ ಆಕ್ಸಿಜನ್ ಸಪೋರ್ಟ್ನಲ್ಲಿದ್ದ ಅವರಿಗೆ ಇಂದು ಬೆಳಗ್ಗೆ ಆಕ್ಸಿಜನ್ ಸಪೋರ್ಟ್ ತೆಗೆಯಲಾಗಿದೆ.
ಭಗವಾನ್ ಅವರು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ಮಂಗಳವಾರ ಬೆಳಿಗ್ಗೆ ವಾರ್ಡ್ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂದು ಅವರ ಮಗ ಹೇಳಿದ್ದಾರೆ.