ವಾಣಿಜ್ಯ

ಪಡಿತರ ಅಕ್ರಮ ತಡೆಯೋಕೆ ರಾಜ್ಯಮಟ್ಟದ ಜಾಗೃತ ದಳ ರಚನೆ ಶೀಘ್ರ ಎಂದ ಸಚಿವ ಗೋಪಾಲಯ್ಯ

ಬೆಂಗಳೂರು: ಪಡಿತರ ಅಕ್ರಮ ತಡೆಯುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಜಾಗೃತ ದಳ ರಚನೆ ಮಾಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ‌ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಚನ್ನರಾಯಪಟ್ಟಣ ದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಪಡಿತರ ಅಕ್ರಮ ದಾಸ್ತಾನು ಮಾರಾಟ ಮಾಡುತ್ತಿರುವ ದೂರುಗಳು‌ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಾಯಿಂಟ್ ಡೈರೆಕ್ಟರ್ ನೇತೃತ್ವದಲ್ಲಿ ಜಾಗೃತದಳ ರಚನೆಗೆ ಚಿಂತನೆ ನಡೆಸಲಾಗಿದೆ ಈ ಮೂಲಕ ಅಕ್ರಮ ತಡೆಗೆ ಕಠಿಣ ಕ್ರಮವಹಿಸಲಾಗಿದೆ ಎಂದರು.

ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ ೮೦೦ ಚೀಲ ರಾಗಿ ಅಕ್ರಮ ಸಾಗಾಣೆ ಬಗ್ಗೆ ಮಾಹಿತಿ ಪಡೆಯಲಾಗಿದೆ ಅಲ್ಲದೆ ಜಿಲ್ಲಾ ಆಹಾರ ಉಪ ನಿರ್ದೇಶಕ ರೊಂದಿಗೆ ಮಾತನಾಡಿದ್ದು ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ಎಲ್ಲೆ ಅಕ್ರಮ ಪಡಿತರ ಮಾರಾಟ ದಾಸ್ತಾನು ಮಾಡಿದವರ ವಿರುದ್ಧ ಹಾಗೂ ದಾಸ್ತಾನು ಮಾಡಲು ಸಹಕರಿಸುವ ವ್ಯಕ್ತಿಗಳ ವಿರುದ್ಧ ವೂ ಕಾನೂನು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.