ಜಿಲ್ಲೆ

ಯಲ್ಲಮ್ಮನ ಹುಂಡಿಯಲ್ಲಿ 1.37 ಕೋಟಿ ರೂ. ಮೊತ್ತದ ಕಾಣಿಕೆ ಸಂಗ್ರಹ

ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದ ಯಲ್ಲಮ್ಮದೇವಿ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಬುಧವಾರ ಪೂರ್ಣಗೊಂಡಿತು. ಈ ದೇವಸ್ಥಾನದಲ್ಲಿ ಮೇ 17ರಿಂದ ಜೂನ್ 30ರ ಅವಯಲ್ಲಿ ಭಕ್ತರು ಹಾಕಿದ 1,30,42,472 ನಗದು,  4.44 ಲಕ್ಷ ವೌಲ್ಯದ ಚಿನ್ನಾಭರಣ, 2.29 ಲಕ್ಷ ವೌಲ್ಯದ ಬೆಳ್ಳಿ ಆಭರಣಗಳು ಸೇರಿ 1.37 ಕೋಟಿ ರೂ.ಮೊತ್ತದ ಕಾಣಿಕೆ ಸಂಗ್ರಹವಾಗಿದೆ. ಯಲ್ಲಮ್ಮ ದೇವಿ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಎಪಿಬಿ ಮಹೇಶ ಮಾತನಾಡಿ, ಮೇ ಮತ್ತು ಜೂನ್ ತಿಂಗಳ 45 ದಿನಗಳಲ್ಲಿ ಯಲ್ಲಮ್ಮ ದೇಗುಲಕ್ಕೆ ಬಂದ ಭಕ್ತರು 1.37 ಕೋಟಿ ರೂ. ವೌಲ್ಯದ ಕಾಣಿಕೆ ಅರ್ಪಿಸಿದ್ದಾರೆ.

ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಕಾಣಿಕೆ ಹುಂಡಿ ಎಣಿಕೆ ಮಾಡುತ್ತಿರುವ ದೇವಸ್ಥಾನ ಸಿಬ್ಬಂದಿ ಹಾಗೂ ಅಧಿಕಾರಿಗಳು.

ಶಕ್ತಿ ಯೋಜನೆಯಿಂದಾಗಿಯೂ ಕಾಣಿಕೆ ಪ್ರಮಾಣ ಹೆಚ್ಚಿದೆ. ಈ ಮೊತ್ತವನ್ನು ರಿಂಗ್ ರಸ್ತೆ, ತಂಗುದಾಣ ನಿರ್ಮಾಣ ಸೇರಿ ಭಕ್ತರಿಗೆ ಮೂಲಸೌಕರ್ಯ ಒದಗಿಸಲು ಬಳಸಲಾಗುವುದು ಎಂದು ಹೇಳಿದರು. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ವೈ.ವೈ.ಕಾಳಪ್ಪನವರ, ಅಭಿಯಂತ ಎ.ವಿ.ಮೂಳ್ಳೂರ, ಮುಜರಾಯಿ ಇಲಾಖೆ ಸಹಾಯಕ ಆಯುಕ್ತ ಬಸವರಾಜ ಜಿರಗ್ಯಾಳ, ಅಧೀಕ್ಷಕ ಸಂತೋಷ ಶಿರಸಂಗಿ, ಪರಿವೀಕ್ಷಕ ಶೀತಲ ಕಡಟ್ಟಿ, ಎಂ.ಎಸ್.ಯಲಿಗಾರ, ಎಂ.ಪಿ.ದ್ಯಾಮನಗೌಡ್ರ, ಅಲ್ಲಮಪ್ರಭು ಪ್ರಭುನವರ, ಪ್ರಕಾಶ ಪ್ರಭುನವರ, ಆರ್.ಎಚ್.ಸವದತ್ತಿ, ರಾಜು ಬೆಳವಡಿ, ವಿ.ಪಿ.ಸೊನ್ನದ, ಪ್ರಭು ಹಂಜಗಿ, ಎಂ.ಎಂ.ಮಾಹುತ ಇದ್ದರು. ಯಲ್ಲಮ್ಮ ದೇವಸ್ಥಾನ, ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ, ಧಾರ್ಮಿಕ ದತ್ತಿ ಇಲಾಖೆ, ಸವದತ್ತಿ ತಹಸೀಲ್ದಾರ್ ಕಚೇರಿ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿ ಜುಲೈ 5, 6 ಮತ್ತು 12ರಂದು ಹುಂಡಿ ಎಣಿಕೆ ನಡೆಸಿದರು.